ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹಲವು ದಿನಗಳಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬಿಜೆಪಿ ಕಾರ್ಯಕ್ರಮಗಳಿಂದ ದೂರು ಉಳಿದಿದ್ದು, ಪಕ್ಷ ತೊರೆಯಲು ನಿರ್ಧರಿಸಿದ್ದಾರೆ ಎಂಬ ಮಾತುಗಳು ಕೇಳಿಬಂದಿತ್ತು. ಅಲ್ಲದೇ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೊತೆ ನಿರಂತರ ಸಂಪರ್ಕದಲ್ಲಿರುವ ರಮೇಶ್ ಜಾರಕಿಹೊಳಿ ಜೆಡಿಎಸ್ ಗೆ ಸೇರ್ಪಡೆಯಾಗಲಿದ್ದಾರೆ ಎಂಬ ಚರ್ಚೆ ನಡೆದಿತ್ತು. ಈ ಎಲ್ಲಾ ಬೆಳವಣಿಗೆಗಳಿಗೆ ಇದೀಗ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸ್ಪಷ್ಟನೆ ನೀಡಿದ್ದಾರೆ.
ಬೆಳಗಾವಿಯ ಬೆಳಗುಂದಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ನನ್ನ ಮನಸ್ಸಿಗೆ ಬೇಜಾರಾಗಿ ಕಳೆದ ಒಂದು ವರ್ಷಗಳಿಂದ ದೂರ ಉಳಿದಿದ್ದೆ. ಆದರೆ ಇಂದು ಒಂದು ವಿಚಾರದ ಬಗ್ಗೆ ಸ್ಪಷ್ಟನೆ ನೀಡುತ್ತೇನೆ. ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಜೊತೆ ಮಾತನಾದಿದ್ದು ನಿಜ. ನಿತ್ಯವೂ ಕುಮಾರಸ್ವಾಮಿಯವರು ನನ್ನ ಜೊತೆ ಮಾತನಾಡುತ್ತಾರೆ. ಆದರೆ ನಾನು ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ. ನನ್ನ ಉದ್ದೇಶ ನಾನು ಮಾಡುತ್ತೇನೆ. ನಿನ್ನ ಉದ್ದೇಶ ನೀನು ಮಾಡು. ಆದರೆ ಇಬ್ಬರ ಉದ್ದೇಶವೂ ಒಂದೇ ಯಾವ ಕಾರಣಕ್ಕೂ ಕಾಂಗ್ರೆಸ್ ಅಧಿಕಾರಕ್ಕೆ ಬರಬಾರದು ಎಂಬುದು ಕುಮಾರಸ್ವಾಮಿಯವರ ಮಾತು. ನಾನು ಜೆಡಿಎಸ್ ಗೆ ಸೇರ್ಪಡೆಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
BJP ನಾಯಕರೊಂದಿಗೆ ಚಿಲುಮೆ ಸಂಸ್ಥೆ ಸಂಪರ್ಕ ಜಗಜ್ಜಾಹೀರು!
https://pragati.taskdun.com/voter-id-scamcongress-tweetminister-ashwaththanarayanacm-basavaraj-bommai/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ