ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಾಸಕ ರಮೇಶ್ ಜಾರಕಿಹೊಳಿ ಸಿಎಂ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರಿನ ಆರ್.ಟಿ.ನಗರ ನಿವಾಸಕ್ಕೆ ಆಗಮಿಸಿದ ರಮೇಶ್ ಜಾರಕಿಹೊಳಿ, ಸಿಎಂ ಭೇಟಿಯಾಗಿದ್ದಾರೆ. ಇತ್ತೀಚೆಗೆ ಬೆಳಗಾವಿ ನಿವಾಸದಲ್ಲಿ ಸಚಿವ ಉಮೇಶ್ ಕತ್ತಿ ಟೀಂ ಜಾರಕಿಹೊಳಿ ಸಹೋದರರನ್ನು ಹೊರಗಿಟ್ಟು ಸಭೆ ನಡೆಸಿತ್ತು. ನಂತರ ಮೂರ್ನಾಲ್ಕು ದಿನಗಳ ಹಿಂದಷ್ಟೇ ಕತ್ತಿ ನಿಯೋಗ ಸಿಎಂ ಭೇಟಿಯಾಗಿತ್ತು. ಭೇಟಿ ವೇಳೆ ಜಾರಕಿಹೊಳಿ ಸಹೋದರರ ವಿರುದ್ಧ ದೂರು ನೀಡಿದ್ದಾರೆ.
ಉಮೇಶ್ ಕತ್ತಿ ನಿಯೋಗದಿಂದ ಸಿಎಂ ಭೇಟಿ ಬೆನ್ನಲ್ಲೇ ಇದೀಗ ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿಯಾಗಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಸಚಿವ ಸಂಪುಟ ವಿಸ್ತರಣೆ ಮಾತು ಕೇಳಿ ಬರುತ್ತಿರುವುದರಿಂದ ಸಂಪುಟ ಸೇರುವ ಸಂಬಂಧವೂ ಈ ಭೇಟಿ ನಡೆದಿರಬಹುದು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ