ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸುಳ್ಳು ಮಾಹಿತಿಗಳನ್ನು ನೀಡಿ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ಕೆಪಿಸಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಹಾಗೂ ರಮೇಶ್ ಬಾಬು ಕೇಂದ್ರ ಚುನಾವಣಾ ಆಯೋಗಕ್ಕೆ ರಾಜ್ಯ ಚುನಾವಣಾ ಆಯುಕ್ತರ ಮೂಲಕ ದೂರು ಸಲ್ಲಿಸಿದ್ದಾರೆ.
2019ರ ವಿಧನಸಭಾ ಉಪಚುನಾವಣೆ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಸೌಭಾಗ್ಯ ಲಕ್ಷ್ಮಿ ಸಕ್ಕರೆ ಕಾರ್ಖಾನೆ ವ್ಯವಹಾರ, ಅಪೆಕ್ಸ್ ಬ್ಯಾಂಕ್ ನಲ್ಲಿ ಪಡೆದಿರುವ ಸಾಲದ ವಿವವರ ಕುಟುಂಬ ಸದಸ್ಯರ ಸಾಲದ ವಿವರ, ರೈತರಿಗೆ ಪಾವತಿಸಬೇಕಿರುವ ಬಾಕಿ ಹಣ ಸೇರಿದಂತೆ ಮತ್ತಿತರ ಮಾಹಿತಿಗಳನ್ನು ಸಮರ್ಪಕವಾಗಿ ನೀಡದೇ ಹಲವು ಮಾಹಿತಿಗಳನ್ನು ಮುಚ್ಚಿಟ್ಟಿದ್ದಾರೆ.
ರಮೇಶ್ ಜಾರಕಿಹೊಳಿ ನಿರ್ದೇಶಕರಾಗಿರುವ ಸೌಭಾಗ್ಯಲಕ್ಷ್ಮಿ ಶುಗರ್ ಕಾರ್ಖಾನೆ ಸುಮಾರು 578 ಕೋಟಿ ಸಾಲ ಮಾಡಿದ್ದು, ರೈತರಿಗೆ 50 ಕೋಟಿಗೂ ಅಧಿಕ ಬಾಕಿ ಉಳಿಸಿಕೊಂಡಿದೆ. ಈ ವಿವರಗಳನ್ನು ಚುನಾವಣ ಪ್ರಮಾಣಪತ್ರದಲ್ಲಿ ಮುಚ್ಚಿಟ್ಟಿದ್ದಾರೆ. ಆದ್ದರಿಂದ ಇದನ್ನು ಕಾಗ್ನಿಜೆನ್ಸ್ ಅಪರಾಧ ಎಂದು ಪರಿಗಣಿಸಿ ರಮೇಶ್ ಜಾರಕಿಹೊಳಿ ವಿರುದ್ಧ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕದಲ್ಲಿ ಹುಟ್ಟಲು ಏಳು ಜನ್ಮದ ಪುಣ್ಯಬೇಕು; ಸಿಎಂ ಬೊಮ್ಮಾಯಿ
https://pragati.taskdun.com/latest/67th-karnataka-rajyotsavacm-basavaraj-bommaiflag-hosting/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ