Latest

ಬಿಜೆಪಿ ಗರ್ಭಗುಡಿ ಸಂಸ್ಕೃತಿ ರಮೇಶ್ ಗೆ ಒಗ್ಗಲ್ಲ; ಕಾಂಗ್ರೆಸ್ ಅಥವಾ ಜೆಡಿಎಸ್ ಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ -ಅಮರೇಗೌಡ ಬಯ್ಯಾಪುರ

ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕು ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಹೇಳಿಕೆ ನೀಡಿರುವ ಬೆನ್ನಲ್ಲೇ ಕಾಂಗ್ರೆಸ್ ಶಾಸಕ ಅಮರೇಗೌಡ ಬಯ್ಯಾಪುರ, ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಅಥವಾ ಜೆಡಿಎಸ್ ಗೆ ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಮೊದಲಿನಿಂದಲೂ ಕಾಂಗ್ರೆಸ್ ನಲ್ಲಿದ್ದವರು. ಅವರಿಗೆ ಬಿಜೆಪಿ ಗರ್ಭಗುಡಿ ಸಂಸ್ಕೃತಿ ಒಗ್ಗಲ್ಲ ಅಂತಾ ಅನಿಸಿದೆ. ಮುಂದಿನ ದಿನಗಳಲ್ಲಿ ಬೇರೆ ಪಕ್ಷಕ್ಕೆ ಹೋದರೂ ಅಚ್ಚರಿಯಿಲ್ಲ ಎಂದು ಹೇಳಿದ್ದಾರೆ.

Home add -Advt

ಬಿಎಸ್ ವೈ ಅವರನ್ನು ಸಿಎಂ ಮಾಡಿದ್ದು ರಮೇಶ್ ಜಾರಕಿಹೊಳಿಯವರೇ. ಈಗ ಬಿಎಸ್ ವೈ ಅವರನ್ನು ಕೆಳಗಿಳಿಸುತ್ತಾರೆ ಎಂದು ನನಗೆ ಅನಿಸುತ್ತಿಲ್ಲ. ನೋ ಯಡಿಯೂರಪ್ಪ, ನೋ ಬಿಜೆಪಿ ಇನ್ ಕರ್ನಾಟಕ ಎಂದು ಹೇಳಿದರು.

ತೇಜಸ್ವಿನಿ ನಾಯಿಕವಾಡಿ ನಿಧನ

ರಾಜಿನಾಮೆ, ರಾಜಕೀಯ ನಿವೃತ್ತಿ ಬಗ್ಗೆ ಯೋಚಿಸಿದ್ದು ನಿಜ; ರಮೇಶ್ ಜಾರಕಿಹೊಳಿ

Related Articles

Back to top button