ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ದೃಶ್ಯಾವಳಿಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ತಡೆ ನೀಡಿದೆ.
ರಮೇಶ್ ಜಾರಕಿಹೊಳಿ ಸಿಡಿ ಪ್ರಸಾರ ಮಾಡದಂತೆ ಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಪೀಠ ಮಾಧ್ಯಮಗಳಲ್ಲಿ ಸಿಡಿ ದೃಶ್ಯ ಪ್ರಸಾರ ಮಾಡದಂತೆ ತಡೆ ನೀಡಿದೆ. ಆದರೆ ಸತ್ಯವಾದ ವಿಷಯವನ್ನು ಪ್ರಸಾರ ಮಡುವುದಕ್ಕೆ ತಡೆಯಿಲ್ಲ ಎಂದು ಕೊರ್ಟ್ ಹೇಳಿದೆ
ರಾಸಲೀಲೆ ಪ್ರಕರಣ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ