Latest

ಪಂಚತಾರಾ ಹೊಟೆಲ್ ನಲ್ಲಿ ಮಜಾ ಮಾಡುತ್ತಿಲ್ಲ; ಡಿಸಿಎಂ ಹುದ್ದೆ ಕೇಳಲೂ ಇಲ್ಲ – ಸಚಿವ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಡಿಸಿಎಂ ಹುದ್ದೆ ನೀಡುವುದು ಬಿಡುವುದು ಹೈಕಮಾಂಡ್ ಗೆ ಬಿಟ್ಟ ನಿರ್ಧಾರ. ನಾನು ಡಿಸಿಎಂ ಹುದ್ದೆ ಆಕಾಂಕ್ಷಿಯೂ ಅಲ್ಲ, ವರಿಷ್ಠರಿಗೆ ಬೇಡಿಕೆಯನ್ನೂ ಇಟ್ಟಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಡಿಸಿಎಂ ಸ್ಥಾನಕ್ಕಾಗಿ ಜಾರಕಿಹೊಳಿ ಹಾಗೂ ಸಚಿವ ಸ್ಥಾನಕ್ಕಾಗಿ ಯೋಗೇಶ್ವರ್ ಲಾಭಿ ನಡೆಸಲು ದೆಹಲಿಗೆ ಹೋಗಿದ್ದಾರೆ ಎಂದು ಹೇಳುತ್ತಿರುವ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಮಾತನಾಡಿದ ಸಚಿವ ಜಾರಕಿಹೊಳಿ, ಯೋಗೇಶ್ವರ್ ಅವರನ್ನು ಪರಿಷತ್ ಗೆ ನಾಮನಿರ್ದೇಶನ ಮಾಡಿದ ಹಿನ್ನೆಲೆಯಲ್ಲಿ ಅವರೊಂದಿಗೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದ್ದೇನೆ. ಯಾವುದೇ ರಾಜಕೀಯ ಚರ್ಚೆಗಳನ್ನು ಮಾಡಿಲ್ಲ. ಅತಿಯಾಸೆ ಒಳ್ಳೆಯದಲ್ಲ. ಡಿಸಿಎಂ ಸ್ಥಾನ, ಮಂತ್ರಿ ಸ್ಥಾನ ನೀಡುವುದು ಹೈಕಮಾಂಡ್ ಗೆ ಬಿಟ್ಟದ್ದು ಎಂದರು.

ಬೆಳಗಾವಿ ಪ್ರವಾಹ ಪರಿಸ್ಥಿತಿ ಬಗ್ಗೆ ಮಾತನಾಡಿದ ಅವರು, ಈ ಬಾರಿ ಯಾವುದೇ ಸಮಸ್ಯೆಯಾಗಲ್ಲ, ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

ಇನ್ನು ಕೊರೊನಾ ಸಂದರ್ಭದಲ್ಲಿ ಉಸ್ತುವಾರಿ ಸಚಿವರು ಜಿಲ್ಲೆಯಲ್ಲೇ ಇರಬೇಕು ಎಂದು ಸಿಎಂ ಸೂಚಿಸಿದ್ದಾರೆ ನಿಜ. ನಾನು ದೆಹಲಿಗೆ ಬಂದು ಪಂಚತಾರಾ ಹೊಟೆಲ್ ನಲ್ಲಿ ಮಜಾ ಮಾಡುತ್ತಿಲ್ಲ. ಕೆಲಸದ ನಿಮಿತ್ತ ಬಂದಿದ್ದೆ. ಬೆಳಗಾವಿಯಲ್ಲಿ ಸೈಕಲ್ ಮೇಲೆ ಶವ ತೆಗೊಂಡೋಗಿದ್ದು ದುರ್ದೈವ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button