
#ಪ್ರಗತಿವಾಹಿನಿ #pragativahini.com
#ಪ್ರಗತಿವಾಹಿನಿ #pragativahini.com
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಂಪುಟ ವಿಸ್ತರಣೆ ಹಗ್ಗಜಗ್ಗಾಟ ಮುಂದುವರೆದಿದ್ದು, ಮೂಲ-ವಲಸಿಗ ಬಿಜೆಪಿ ನಾಯಕರ ನಡುವೆ ಸಚಿವ ಸ್ಥಾನಕ್ಕಾಗಿ ಪೈಪೋಟಿ ಆರಂಭವಾಗಿದೆ. ಈ ನಡುವೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ಟೈಂ ಬಂದರೆ ನೋಡೋಣ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಾರಕಿಹೊಳಿ, ಸೋತವರಿಗೂ ಸಚಿವ ಸ್ಥಾನ ನೀಡಬೇಕು ಎಂದಾದರೆ ತಮ್ಮ ಸ್ಥಾನ ತ್ಯಾಗ ಮಾಡಿ ಕೊಡಿಸಲಿ ಎಂಬ ಶಾಸಕ ರೇಣುಕಾಚಾರ್ಯ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಜೀನಾಮೆ ನೀಡುವ ಸಮಯ ಬಂದರೆ ನೋಡೋಣ ಬಿಡಿ. ತ್ಯಾಗ ಮಾಡಿ ಬಂದ 17 ಜನರಿಗೂ ಸಂಪುಟದಲ್ಲಿ ಸ್ಥಾನ ಸಿಗಬೇಕು ಎಂದು ತಿರುಗೇಟು ನೀಡಿದರು.
ಇದೇ ವೇಳೆ ತಾವು ಡಿಸಿಎಂ ಹುದ್ದೆಗೆ ಒತ್ತಾಯಿಸಿಲ್ಲ. ಆದರೆ ಎಲ್ಲರಿಗೂ ದೊಡ್ಡ ಹುದ್ದೆಗೆ ಹೋಗಬೇಕೆಂಬ ಆಸೆ ಇರುತ್ತದೆ. ನನಗೆ ಡಿಸಿಎಂ ಹುದ್ದೆ ನೀಡುವುದು ವರಿಷ್ಠರ ನಿರ್ಧಾರಕ್ಕೆ ಬಿಟ್ಟದ್ದು ಎನ್ನುವ ಮೂಲಕ ಪರೋಕ್ಷವಾಗಿ ಉಪಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿ ಎಂಬುದನ್ನು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ