Belagavi NewsBelgaum NewsKannada NewsKarnataka NewsLatest

*BREAKING NEWS: ರಮೇಶ್ ಜಾರಕಿಹೊಳಿ ಒಡೆತನದ ಕಾರ್ಖಾನೆ ಮೇಲೆ ಸಿಐಡಿ ದಿಢೀರ್ ದಾಳಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ, ಗೋಕಾಕ್ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಒಡೆತನದ ಸಕ್ಕರೆ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿರುವ ಕಾರ್ಖಾನೆ ಮೇಲೆ ಸಿಐಡಿ ಅಧಿಕಾರಿಗಳು ದಿಡೀರ್ ದಾಳಿ ನಡೆಸಿದ್ದಾರೆ.

Home add -Advt

ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಾರ್ಖಾನೆ ಸ್ಥಾಪಿಸಲು ಅಪೆಕ್ಸ್ ಬ್ಯಾಂಕ್ ನಿಂದ 439 ಕೊಟಿ ಸಾಲ ಪಡೆದಿದ್ದರು. ಆದರೆ ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಮುತ್ತಶೆಟ್ಟಿ ಜ.5ರಂದು ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಸೇರಿದಂತೆ ಹಲವರ ವಿರುದ್ಧ ಕೇಸ್ ದಾಖಲಾಗಿತ್ತು.

ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು ಇಂದು ಚಿಕ್ಕನಂದಿ ಗ್ರಾಮದಲ್ಲಿರುವ ಕಾರ್ಖಾನೆ ಮೇಲೆ ದಾಳಿ ನಡೆಸಿ, ದಾಖಲೆ ಪರಿಶೀಲನೆ ನಡೆಸಿದ್ದಾರೆ.


Related Articles

Back to top button