ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿಯಲ್ಲಿ ಭಿನ್ನಮತ ಭುಗಿಲೆದ್ದಿರುವ ಬೆನ್ನಲ್ಲೇ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಗೊಳಿ ಹೊಸ ಬಾಂಬ್ ಸಿಡಿಸಿದ್ದು, 22 ಜನ ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಟ್ರಯಲ್ ಆಗಿ 5 ಮಂದಿ ಶಾಸಕರ ರಾಜೀನಾಮೆ ಕೊಡಿಸಲು ಸಿದ್ದ ಎಂದಿದ್ದಾರೆ.
ಚಾಮರಾಜನಗರದಲ್ಲಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ಬಿಜೆಪಿ ಹೈಕಮಾಂಡ್ ಅನುಮತಿ ನೀಡಿದರೆ ಒಂದು ವಾರದೊಳಗೆ ಕಾಂಗ್ರೆಸ್ ನ 5 ಶಾಸಕರ ರಾಜೀನಾಮೆ ಕೊಡಿಸಿ ಬಿಜೆಪಿ ಪಕ್ಷಕ್ಕೆಗೆ ಸೇರ್ಪಡೆಗೊಳಿಸುತ್ತೇನೆ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಾಳಯದಲ್ಲಿ ತಲ್ಲಣ ಸೃಷ್ಟಿಸಿದ್ದಾರೆ.
ಇದೇ ವೇಳೆ ಬಿಜೆಪಿ ನಾಯಕರಲ್ಲೇ ಬಂಡಾಯ ಆರಂಭವಾಗಿದ್ದು, ಸರ್ಕಾರ ಬೀಳಿಸುವ ಯತ್ನ ನಡೆಸಲಾಗುತ್ತಿದೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಚಿವರು, ನಾನು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪರ ಇದ್ದೇನೆ. ಬಿಜೆಪಿ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ ಸೇಫ್ ಆಗಿದೆ. ಬಿಜೆಪಿ ಸರ್ಕಾರ ಮೂರು ವರ್ಷ ಮಾತ್ರವಲ್ಲ 5 ವರ್ಷಗಳ ಕಾಲ ಸೇಫ್ ಆಗಿದೆ. ಯಾವುದೇ ಭಿನ್ನಮತವೂ ಇಲ್ಲ. ಉಮೇಶ್ ಕತ್ತಿ ನನ್ನ ಸ್ನೇಹಿತರು ನಾನು ಅವರೊಂದಿಗೆ ಚರ್ಚಿಸಿದ್ದೇನೆ ಎಂದು ಹೇಳಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ