Latest

ಸಚಿವ ಸ್ಥಾನಕ್ಕಾಗಿ ಕಸರತ್ತು; ರಮೇಶ್ ಜಾರಕಿಹೊಳಿ ಟೆಂಪಲ್ ರನ್

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಈ ಬಾರಿ ಸಚಿವ ಸಂಪುಟದಲ್ಲಿ ಸ್ಥಾನ ಪಡೆದುಕೊಳ್ಳಲೇ ಬೇಕು ಎಂದು ಶತಾಯಗತಾಯ ಪ್ರಯತ್ನ ನಡೆಸಿರುವ ರಮೇಶ್ ಜಾರಕಿಹೊಳಿ ಇದೀಗ ಟೆಂಪಲ್ ರನ್ ಆರಂಭಿಸಿದ್ದಾರೆ.

ಸಚಿವ ಸ್ಥಾನದ ಲಾಬಿಗಾಗಿ ದೆಹಲಿಯಲ್ಲಿ ಬೀಡು ಬಿಟ್ಟಿರುವ ಶಾಸಕ ರಮೇಶ್ ಜಾರಕಿಹೊಳಿ, ವರಿಷ್ಠರನ್ನು ಭೇಟಿಯಾಗಿದ್ದು, ವರಿಷ್ಠರ ಭೇಟಿ ಬಳಿಕ ಟೆಂಪಲ್ ರನ್ ಆರಂಭಿಸಿದ್ದಾರೆ. ಕೇದಾರನಾಥ, ಬದರಿನಾಥಕ್ಕೆ ತೆರಳಿರುವ ರಮೇಶ್ ಜಾರಕಿಹೊಳಿ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ನವೆಂಬರ್ ಮೊದಲ ವಾರದಲ್ಲಿ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ದಟ್ಟವಾಗಿದ್ದು, ಈ ಹಿನ್ನೆಲೆಯಲ್ಲಿ ಈಬಾರಿ ಮಂತ್ರಿ ಹುದ್ದೆಯನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ರಮೇಶ್ ಜಾರಕಿಹೊಳಿ ಕಸರತ್ತು ನಡೆಸಿದ್ದಾರೆ.
ರಾಜ್ಯದಲ್ಲಿ ವಿದ್ಯುತ್ ಕೊರತೆ ಇಲ್ಲ: ಸಿಎಂ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button