Kannada NewsLatest

ನೀರವ್ ಮೋದಿ, ಚೋಕ್ಸಿ, ಮಲ್ಯ ರೀತಿಯಲ್ಲೇ ರಮೇಶ್ ಜಾರಕಿಹೊಳಿ ವಂಚನೆ – ಎಂ.ಲಕ್ಷ್ಮಣ್ ಆರೋಪ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ನೀರವ್ ಮೋದಿ, ಚೋಕ್ಸಿ, ಮಲ್ಯ ರೀತಿಯಲ್ಲೇ ರಮೇಶ್ ಜಾರಕಿಹೊಳಿ  ವಂಚನೆ ಮಾಡಿದ್ದು, 660 ಕೋಟಿ  ಬಾಕಿ ಉಳಿಸಿಕೊಂಡಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಲಕ್ಷ್ಮಣ್, ಉದ್ಯಮಿಗಳಾದ ನೀರವ್ ಮೋದಿ, ವಿಜಯ್ ಮಲ್ಯ, ಮುಕುಲ್ ಚೋಕ್ಸಿ ಹಗರಣಗಳ ರೀತಿಯಲ್ಲಿಯೇ ರಮೇಶ್ ಜಾರಕಿಹೊಳಿ ಕೂಡ ವಂಚನೆ ಎಸಗಿದ್ದಾರೆ. ಬೆಳಗಾವಿಯ ಗೋಕಾಕ್ ನಲ್ಲಿ ಸೌಭಾಗ್ಯ ಲಕ್ಷ್ಮಿ ಶುಗರ್ ಸಕ್ಕರೆ ಕಾರ್ಖಾನೆ ಇದ್ದು, ಇದರ ಮಾಲೀಕರಾಗಿರುವ ರಮೇಶ್ ಜಾರಕಿಹೊಳಿ ಅಪೆಕ್ಸ್ ಬ್ಯಾಂಕ್ ಗಳಲ್ಲಿ ಒಳಪಡುವ ಸುಮಾರು 15 ಬ್ಯಾಂಕ್ ಗಳಿಂದ 366 ಕೋಟಿ ಸಾಲ ಪಡೆದಿದ್ದಾರೆ.

ಯೂನಿಯನ್ ಬ್ಯಾಂಕ್ ನಿಂದ 20 ಕೋಟಿ, ಹರಿಯಂತ ಬ್ಯಾಂಕ್ ನಿಂದ 20 ಕೋಟಿ ಸಾಲ, ತೆರಿಗೆ ಇಲಾಖೆಯಿಂದ 200 ಕೋಟಿ ಬಾಕಿ ಉಳಿಸಿಕೊಂಡಿದ್ದು, ಒಟ್ಟು 660 ಕೋಟಿ ಸಾಲ ಪಡೆದಿದ್ದಾರೆ. ಆದರೂ ಈವರೆಗೆ ಯಾವ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.

ಸಾಹುಕಾರ್ ಸಕ್ಕರೆ ಕಾರ್ಖಾನೆ ದಿವಾಳಿಯಾಗಿದೆ ಎಂದು ಜಾಹೀರಾತು; ಮೊದಲು ಸಿಎಂ, ಸಹಕಾರ ಸಚಿವರು ಉತ್ತರಿಸಲಿ; ಡಿ.ಕೆ.ಶಿವಕುಮಾರ್ ಆಗ್ರಹ

ಜಿಲ್ಲಾಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಕೊಟ್ಟ ಸಿಎಂ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button