ಕೊರೊನಾ ಸೋಂಕಿಗೆ ಇಂದು ಇಬ್ಬರು ಬಲಿ

ಪ್ರಗತಿವಾಹಿನಿ ಸುದ್ದಿ; ಮುಂಬೈ: ದೇಶಾದ್ಯಂತ ಮಾರಣಾಂತಿಕ ಕೊರೊನಾ ವೈರಸ್ ಉಲ್ಬಣಗೊಳ್ಳುತ್ತಿದ್ದು, ಇಂದು ಕೂಡ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್ ಎರಡನೇ ಬಲಿಪಡೆದಿದ್ದರೆ ಬಿಹಾರ ರಾಜ್ಯದಲ್ಲಿ ಮೊದಲ ಬಲಿಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದವರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಮಹಾರಾಷ್ಟ್ರದಲ್ಲಿ 63 ವರ್ಷದ ವ್ಯಕ್ತಿ ಹಾಗೂ ಬಿಹಾರದಲ್ಲಿ 38 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಕುರಿತು ಮಹಾರಾಷ್ಟ್ರದ ಸಾರ್ವಜನಿಕ ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದ್ದು, ನಿನ್ನೆ ರಾತ್ರಿ ಮೃತ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ತಗುಲಿದ್ದು, ವೈದ್ಯಕೀಯ ವರದಿಯಲ್ಲಿ ದೃಢಪಟ್ಟಿದೆ. ಜೊತೆಗೆ ರೋಗಿಗೆ ಮಧುಮೇಹ, ಅಧಿಕ ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಕಾಯಿಲೆಗಳು ಇದ್ದವು ಎಂದು ತಿಳಿಸಿದೆ.

Home add -Advt

ಬಿಹಾರದ 38 ವರ್ಷದ ವ್ಯಕ್ತಿ ಕತಾರ್ ದಿಂದ ಇತ್ತೀಚೆಗೆ ತಮ್ಮ ಗ್ರಾಮಕ್ಕೆ ವಾಪಸ್ ಆಗಿದ್ದರು. ಆದರೆ ಕೊರೊನಾ ಸೋಂಕು ತಗುಲಿದ್ದು ದೃಢವಾಗಿದ್ದರಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದಾರೆ.

Related Articles

Back to top button