Kannada NewsLatest

ರಮೇಶ್ ಜಾರಕಿಹೊಳಿ ಪರ ಆಪ್ತರ ಮನವಿ; ಸಚಿವ ಸ್ಥಾನ ನೀಡುವಂತೆ ಆಗ್ರಹ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಶಾಸಕ ರಮೇಶ್ ಜಾರಕಿಹೊಳಿಗೆ ಈ ಬಾರಿ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ನೀಡಬೇಕು ಎಂದು ಆಪ್ತರು ಆಗ್ರಹಿಸಿದ್ದಾರೆ. ಜಾರಕಿಹೊಳಿಗೆ ಸಚಿವ ಸ್ಥಾನ ನೀಡಿದರೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಬರದಿಂದ ಸಾಗುತ್ತವೆ. ಈ ನಿಟ್ಟಿನಲ್ಲಿ ಅವರಿಗೆ ಮಂತ್ರಿ ಸ್ಥಾನ ನೀಡಿ ಎಂದು ಆಪ್ತರ ಆಗ್ರಹವಾಗಿದೆ.

ಶಾಸಕ ಮಹೇಶ್ ಕುಮಟಳ್ಳಿ ವರಿಷ್ಠರಿಗೆ ಮನವಿ ಮಾಡಿದ್ದು, ನನಗೆ ಸಚಿವ ಸ್ಥಾನ ನೀಡದಿದ್ದರೂ ಪರವಾಗಿಲ್ಲ, ನನಗೆ ಸಚಿವ ಸ್ಥಾನ ನೀಡಿ ಎಂದು ಕೇಳುತ್ತಿಲ್ಲ, ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ಆದರೆ ರಮೇಶ್ ಜಾರಕಿಹೊಳಿಯವರಿಗೆ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.

Home add -Advt

ರಮೇಶ್ ಜಾರಕಿಹೊಳಿ ಜವಾಬ್ದಾರಿ ಸ್ಥಾನ ನಿಭಾಯಿಸಿದವರು, ಹಲವು ಅಭಿವೃದ್ಧಿ ಕೆಲಸಗಳನ್ನು ಮಾಡಿದವರು. ಈಗಲೂ ಅವರಿಗೆ ಸಚಿವ ಸ್ಥಾನ ನೀಡಿದರೆ ನಮ್ಮ ಭಾಗದಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆಯುತ್ತವೆ ಈ ನಿಟ್ಟಿನಲ್ಲಿ ವರಿಷ್ಠರ ಬಳಿ ಮನವಿ ಮಾಡಿದ್ದೇವೆ ಎಂದು ಹೇಳಿದರು.

ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ದೆಹಲಿಗೆ ತೆರಳಲಿರುವ ಬೆನ್ನಲ್ಲೇ ನಿನ್ನೆ ಸಿಎಂ ಭೇಟಿಯಾಗಿದ್ದ ಶಾಸಕ ರಮೇಶ್ ಜಾರಕಿಹೊಳಿ, ಮಹತ್ವದ ಚರ್ಚೆ ನಡೆಸಿದ್ದಾರೆ. ಈ ಬಾರಿ ಸಂಪುಟದಲ್ಲಿ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ಸಿಗುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ.

Related Articles

Back to top button