*ರಮೇಶ್ ಜಾರಕಿಹೊಳಿ- ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೆ ಸಮಯ ನಿಗದಿ; ಮತ್ತಷ್ಟು ಕುತೂಹಲ ಮೂಡಿಸಿದ ಸಿಡಿ ಕೇಸ್*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ತನ್ನ ವಿರುದ್ಧ ಸಿಡಿ ಷಡ್ಯಂತ್ರ ನಡೆಸಿದ್ದೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅವರನ್ನು ರಾಜಕೀಯವಾಗಿ ಮುಗಿಸುವುದಾಗಿ ಶಪಥ ಮಾಡಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಪಟ್ಟು ಹಿಡಿದಿದ್ದರು. ಇದರ ಬೆನ್ನಲ್ಲೇ ರಮೇಶ ಜಾರಕಿಹೊಳಿ ಕೇಂದ್ರ ಗೃಹ ಸಚಿವರ ಭೇಟಿಗೆ ಸಮಯ ನಿಗದಿಯಾಗಿದೆ.
ಸಿಡಿ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ನಿನ್ನೆವರೆಗೂ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಬೆನ್ನು ಬಿದ್ದಿದ್ದ ರಮೇಶ್ ಜಾರಕಿಹಿಒಳಿ ಇದೀಗ ಪ್ರಕರಣವನ್ನು ದೆಹಲಿ ಅಂಗಳಕ್ಕೆ ತಲುಪಿಸಲು ಮುಂದಾಗಿದ್ದಾರೆ. ಸ್ವತ: ಗೃಹ ಸಚಿವರನ್ನು ಭೇಟಿಯಾಗಿ ಸಿಬಿಐಗೆ ಕೇಸ್ ಹಸ್ತಾಂತರುಇಸುವಂತೆ ಮನವಿ ಮಾಡಲಿದ್ದಾರೆ.
ಈ ನಿಟ್ಟಿನಲ್ಲಿ ಇಂದು ಸಂಜೆ ರಮೇಶ್ ಜಾರಕಿಹೊಳಿ ಬೆಂಗಳೂರಿನಿಂದ ದೆಹಲಿಗೆ ತೆರಳಲಿದ್ದು, ನಾಳೆ ಸಂಜೆ ಅಮಿತ್ ಶಾ ಭೇಟಿಯಾಗಲಿದ್ದೆ. ಈ ವೇಳೆ ಸಿಡಿ ಪ್ರಕರಣದ ಬಗ್ಗೆ ದಾಖಲೆ ಸಮೇತ ವಿವರಿಸಲಿದ್ದು, ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಮಾಡಲಿದ್ದಾರೆ. ರಮೇಶ್ ಜಾರಕಿಹೊಳಿ ನಡೆ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
*ಮತ್ತೆ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*
https://pragati.taskdun.com/heavy-raintamilunadukarnatakaimd/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ