ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ಭೇಟಿಯಾದ ರಮೇಶ್ ಜಾರಕಿಹೊಳಿ, ಲೋಕಸಭಾ ಚುನಾವಣೆ ಮೈತ್ರಿ ವಿಚಾರವಾಗಿ ಚರ್ಚೆ ನಡೆಸಿದರು.
ಕುಮಾರಸ್ವಾಮಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಹೆಚ್.ಡಿ.ಕೆ ಭೇಟಿಯಲ್ಲಿ ಯಾವುದೇ ವಿಶೇಷತೆ ಇಲ್ಲ. ಅವರ ಆರೋಗ್ಯ ವಿಚಾರಿಸಲು ಭೇಟಿ ನೀಡಿದ್ದೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಹೈಕಮಾಂಡ್ ನಿರ್ಧಾರವಾಗಿದ್ದು, ಇದನ್ನು ಸ್ವಾಗತ ಮಾಡುತ್ತೇನೆ ಎಂದರು.
ಕುಮಾರಸ್ವಾಮಿಯವರು ಸತತ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಮೈತ್ರಿಯಿಂದಾಗಿ ಇನ್ನಷ್ಟು ಶಕ್ತಿ ಬರಲಿದೆ ಎಂದು ಹೇಳಿದರು.

