ನನಗಾಗಿ ಯಾವುದೇ ಸಚಿವ ಸ್ಥಾನವನ್ನು ಕೇಳಿಲ್ಲ. ಕೆ ಎಂ ಎಫ್ ಅಧ್ಯಕ್ಷನಾಗಿ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದೇನೆ. ಆದರೆ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವಂತೆ ಕೇಳುತ್ತಿದ್ದೇವೆ
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶೀಘ್ರದಲ್ಲಿಯೇ ರಮೇಶ್ ಜಾರಕಿಹೊಳಿ ಹಾಗೂ ಶ್ರೀಮಂತ ಪಾಟೀಲ್ ಗೆ ಸಚಿವ ಸ್ಥಾನ ಸಿಗುವ ಭರವಸೆಯಿದೆ. ಪ್ರಕರಣ ಮುಗಿಯುತ್ತಿದ್ದಂತೆ ಸಚಿವ ಸ್ಥಾನ ಸಿಗಲಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.
ಸಿಎಂ ಭೇಟಿ ಬಳಿಕ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ, ನಾವು ಯಾವುದೇ ರಹಸ್ಯ ಸಭೆಗಳನ್ನು ನಡೆಸಲ್ಲ, ಶಾಸಕರು ಒಟ್ಟಿಗೆ ಸೇರುತ್ತೇವೆ ಅಷ್ಟೇ. ಪಕ್ಷ ಹಾಗೂ ಸರ್ಕಾರದ ವಿರುದ್ಧ ಸಭೆ ಮಾಡುವುದೂ ಇಲ್ಲ. ನನಗಾಗಿ ಯಾವುದೇ ಸಚಿವ ಸ್ಥಾನವನ್ನು ಕೇಳಿಲ್ಲ. ಕೆ ಎಂ ಎಫ್ ಅಧ್ಯಕ್ಷನಾಗಿ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದೇನೆ. ಆದರೆ ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡುವಂತೆ ಕೇಳುತ್ತಿದ್ದೇವೆ ಎಂದರು.
Home add -Advt
ರಮೇಶ್ ಜಾರಕಿಹೊಳಿಗೆ, ಶ್ರೀಮಂತ ಪಾಟೀಲ್ ಗೆ ಖಂಡಿತ ಒಳ್ಳೆಯದಾಗುತ್ತದೆ. ಸಚಿವ ಸ್ಥಾನ ನೀಡುವ ವಿಶ್ವಾಸವಿದೆ ಎಂದು ಹೇಳಿದರು.