ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ಮತದಾನ ಮಾಡಿದ್ದು, ಬಳಿಕ ಮಾತನಾದಿದ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಹಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ರಮೆಶ್ ಜಾರಕಿಹೊಳಿ, ಚುನಾವಣೆಯ ಕೊನೇ ಗಳಿಗೆವರೆಗೂ ನನಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಸಿಡಿ ಬಿಡುವುದಾಗಿ ಹೇಳಿದ್ದಾರೆ. ಡಿ.ಕೆ.ಶಿವಕುಮಾರ್ ನಿನ್ನೆ ರಾತ್ರಿ ತಮಗೆ ಕರೆ ಮಾಡಿ ಬ್ಲ್ಯಾಕ್ ಮೆಲ್ ಮಾಡಿದ್ದಾಗಿ ಆರೋಪಿಸಿದರು. ಡಿ.ಕೆ.ಶಿವಕುಮಾರ್ ಅವರನ್ನು ಮಟ್ಟಹಾಕಬೇಕು ಎಂದರೆ ಮುಂಬರುವ ಮುಖ್ಯಮಂತ್ರಿಗಳು, ಗೃಹ ಸಚಿವರು ಸಿಡಿ ಕೇಸ್ ನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಮನವಿ ಮಾಡಿದರು.
ಡಿ.ಕೆ.ಶಿವಕುಮಾರ್ ಮೇಲೆ ನನಗೆ ವೈಯಕ್ತಿಕವಾಗಿ ಯಾವುದೆ ದ್ವೇಷವಿಲ್ಲ, ವೈಯಕ್ತಿಕವಾಗಿ ಅವರು ಒಳ್ಳೆಯವರೇ. ಆದರೆ ಅವರು ವಿಷಕನ್ಯೆಯಿಂದ ಮೊದಲು ಹೊರಬರಬೇಕು. ಸರ್ಕಾರ ರಚನೆ ವೇಳೆಯೂ ಮತ್ತೆ ಅವರು ಸಿಡಿ ಬಿಡುಗಡೆ ಮಾಡುವುದಾಗಿ ಬೆದರಿಸಲಿದ್ದಾರೆ ಗೊತ್ತಿದೆ ಎಂದರು.
ಇನ್ನು ವಿಧಾನಸಭಾ ಚುನಾವಣೆಯಲ್ಲಿ ಬೆಳಗಾವಿಯಲ್ಲಿ 13 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ