Latest

ಇದು ರಾಜಕೀಯ ಮಾಡುವ ಸಮಯವಲ್ಲ; ರಮೇಶ್ ಜಾರಕಿಹೊಳಿಗೆ ಟಾಂಗ್ ನೀಡಿದ ಬಿ.ಸಿ.ಪಾಟೀಲ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಈ ನಿಟ್ಟಿನಲ್ಲಿ ಮುಂಬೈಗೆ ತೆರಳಿದ್ದು, ಬಿಜೆಪಿ ನಾಯಕರೊಂದಿಗೆ ಹೊಸ ರಾಜಕೀಯ ತಂತ್ರ ಹೆಣೆಯುತ್ತಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಪರೋಕ್ಷ ಟಾಂಗ್ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಸಿ.ಪಾಟೀಲ್, ಶಾಸಕ ಸ್ಥಾನಕ್ಕೆ ರಮೇಶ್ ಜಾರಕಿಹೊಳಿ ರಾಜೀನಾಮೆ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ ಮಾಹಿತಿ ಇಲ್ಲ. ಇದು ರಾಜಕೀಯ ಮಾಡುವಂತಹ ಸಮಯವಲ್ಲ. ರಾಜಕಾರಣಕ್ಕಾಗಿ ಪ್ರತ್ಯೇಕ ಸಮಯವನ್ನು ಮೀಸಲಿಡೋಣ. ಕೊರೊನಾದಂತಹ ಸಂಕಷ್ಟದ ಸಂದರ್ಭವಿದು. ಮೂರನೆ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಗಮನಹರಿಸಬೇಕಿದೆ. ಹೀಗಾಗಿ ರಾಜಕಾರಣ ಮಾಡುವುದು ಸರಿಯಲ್ಲ ಎಂದು ಪರೋಕ್ಷವಾಗಿ ಟಾಂಗ್ ನೀಡಿದರು.

Home add -Advt

ಇದೇ ವೇಳೆ ಶ್ರೀರಾಮಮಂದಿರ ನಿರ್ಮಾಣಕ್ಕೆ ಹಣ ದುರುಪಯೋಗ ಎಂಬ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಪಿಎಂ ಕೇರ್ಸ್ ಬಗ್ಗೆ ಮಾಹಿತಿ ಕೇಳಿದ್ರೆ ಕೊಡೋಣ. ಆದರೆ ಶ್ರೀರಾಮಮಂದಿರದ ಬಗ್ಗೆ ಲೆಕ್ಕ ಕೇಳಿದರೆ ಕೊಡುವ ಅಗತ್ಯವಿಲ್ಲ ಎಂದರು.
ಮೂವರು ಉಗ್ರರು ಎನ್ ಕೌಂಟರ್ ಗೆ ಬಲಿ

Related Articles

Back to top button