
ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಖಾತೆ ಹಂಚಿಕೆ ಅಸಮಾಧಾನದ ಬೆನ್ನಲ್ಲೇ ಮತ್ತೆ ರೆಸಾರ್ಟ್ ರಾಜಕೀಯ ಆರಂಭವಾಗಿದ್ದು, ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ನಾಲ್ವರು ಸಚಿವರು ಚಿಕ್ಕಮಗಳೂರಿನ ರೆಸಾರ್ಟ್ ಒಂದರಲ್ಲಿ ಬೀಡುಬಿಟ್ಟಿದ್ದಾರೆ.
ಚಿಕ್ಕಮಗಳೂರಿನ ಸರಾಯ್ ರೆಸಾರ್ಟ್ ನಲ್ಲಿ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಅಸಮಾಧಾನಿತ ಸಚಿವರುಗಳ ಗೌಪ್ಯ ಸಭೆ ನಡೆದಿದೆ. ಸಭೆಯಲ್ಲಿ ಸಿ.ಪಿ.ಯೋಗೇಶ್ವರ್, ಗೋಪಾಲಯ್ಯ, ಶಾಸಕ ಎಂಪಿ ಕುಮಾರಸ್ವಾಮಿ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ.
ಒಟ್ಟಾರೆ ಖಾತೆ ಹಂಚಿಕೆ ಬೆನ್ನಲ್ಲೇ ಅಸಮಾಧಾನಿತ ಸಚಿವರು, ಶಾಸಕರ ಈ ಸಭೆ ಸಿಎಂ ಯಡಿಯೂರಪ್ಪನವರಿಗೆ ಮತ್ತೊಂದು ತಲೆನೋವಿಗೆ ಕಾರಣವಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ