ಸತೀಶ್ ಜಾರಕಿಹೊಳಿಗೆ ತಲೆ ಕೆಟ್ಟಿದೆ ಎಂದ ರಮೇಶ್ ಜಾರಕಿಹೊಳಿ

ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ಮಾಜಿ ಸಚಿವ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ತಲೆ ಸರಿ ಇಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಗುಡುಗಿದ್ದಾರೆ.

ಕೊಪ್ಪಳ ತಾಲೂಕಿನ ಮುನಿರಾಬಾದನಲ್ಲಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ ತಮಗೆ ಜಲಸಂಪನ್ಮೂಲ ಖಾತೆ ನಿಭಾಯಿಸಲು ಸಾಧ್ಯವಿಲ್ಲ ಎಂದು ಸತೀಶ್ ಹೇಳಿದ್ದರು. ಅವರ ಬಗ್ಗೆ ಈಗ ಮಾತನಾಡುವುದು ಬೇಡ. ಸತೀಶ್ ಜಾರಕಿಹೊಳಿಗೆ ದೇವರು ಒಳ್ಳೆಯದು ಮಾಡಲಿ ಎಂದರು.

ಇನ್ನು ರಾಜ್ಯದಲ್ಲಿ ಕೊರೊನಾ ವೈರಸ್ ಹರಡದಂತೆ ಸಿಎಂ ಯಡಿಯೂರಪ್ಪ ಈಗಾಗಲೇ ಸಾಕಷ್ಟು ಮುನ್ನೆಚ್ಚಾರಿಕಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ತಿಳಿಸಿದ್ದು, ಜಾಗೃತಿಯಿಂದ ಜನರು ಸ್ಪಂದನೆ ಮಾಡಬೇಕದೆ ಎಂದರು.

ಕೇಂದ್ರ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಸೂಚನೆ ಮೆರೆಗೆ ರಾಜ್ಯದಲ್ಲಿ ಒಂದುವಾರ ಕಾಲ ಈ ಹೆಜ್ಜೆ ತೆಗೆದುಕೊಂಡಿದೆ. ಒಂದು ವಾರದಲ್ಲಿ ಕೊರೊನಾ ವೈರಸ್ ಹತೋಟಿಗೆ ಬಂದು ರಾಜ್ಯದಲ್ಲಿ ಮೊದಲಿನಂತೆ ವ್ಯಾಪಾರ ವಹಿವಾಟು ಆಗಲಿದ್ದು, ಅನಿವಾರ್ಯವಾಗಿ ಜಾತ್ರೆಗಳನ್ನು ಸ್ಥಗಿತ ಮಾಡಬೇಕಾಗಿದೆ ಎಂದು ತಿಳಿಸಿದರು.

Related Articles

Back to top button