Kannada NewsKarnataka NewsLatestPolitics

*ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ*

ಪ್ರಗತಿವಾಹಿನಿ ಸುದ್ದಿ: ಗೋಕಾಕ್ ಬಿಜೆಪಿ ಶಾಸಕ, ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಾರ್ಖಾನೆಗೆ ಸಾಲ ಪಡೆದಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿದೆ.

ರಮೇಶ್ ಜಾರಕಿಹೊಳಿ ಸೌಭಾಗ್ಯಲಕ್ಷ್ಮೀ ಶುಗರ್ಸ್ ಕಂಪನಿ ಪ್ರೈ.ಲಿ. ಹೆಸರಲ್ಲಿ ಕಾರ್ಖಾನೆ ಸ್ಥಾಪನೆ, ವಿಸ್ತರಣೆ, ನಿರ್ವಹಣೆಗಾಗಿ 2013ರಿಂದ 2017ರವರೆಗೆ ಬೆಂಗಳೂರಿನ ಚಾಮರಾಜಪೇಟೆ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿಂದ 232 ಕೋಟಿ 88 ಲಕ್ಷ ಸಾಲ ಪಡೆದಿದ್ದರು. 2023ರ ವೇಳೆಗೆ 439 ಕೋಟಿ 7 ಲಕ್ಷ ಸಾಲ ಬಾಕಿ ಉಳಿದಿತ್ತು. ಈವರೆಗೂ ಸಾಲ ಮರುಪಾವತಿ ಮಾಡಿರಲಿಲ್ಲ.

ಈ ಹಿನ್ನೆಲೆಯಲ್ಲಿ ಬ್ಯಾಂಕ್ ಮ್ಯಾನೇಜರ್ ರಾಜಣ್ಣ ಎಂಬುವವರು ವಿವಿಪುರಂ ಠಾಣೆಯಲ್ಲಿ ರಮೇಶ್ ಜಾರಕಿಹೊಳಿ, ವಸಂತ್ ವಿ.ಪಾಟೀಲ್, ಶಂಕರ್ ಪಾವಡೆ ಹಾಗೂ ಕಾರ್ಖಾನೆಯ ಇಬ್ಬರು ಪದಾಧಿಕಾರಿಗಳ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದರು. ವಿವಿಪುರಂ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಈ ಪ್ರಕರಣವನ್ನು ಸರ್ಕಾರ ಸಿಐಡಿ ತನಿಖೆಗೆ ನೀಡಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button