Latest

ರಮೇಶ್ ಜಾರಕಿಹೊಳಿಯಿಂದಲೂ ರಹಸ್ಯ ಸಭೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆಹಾರ ಸಚಿವ ಉಮೇಶ್ ಕತ್ತಿ ಮನೆಯಲ್ಲಿ ನಡೆದಿದ್ದ ಬಿಜೆಪಿ ನಾಯಕರ ಸಭೆಯ ಬೆನ್ನಲ್ಲೇ ಇದೀಗ ಶಾಸಕ ರಮೇಶ್ ಜಾರಕಿಹೊಳಿ ರಹಸ್ಯ ಸಭೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಶಾಸಕ ರಮೇಶ್ ಜಾರಕಿಹೊಳಿ ಸಭೆ ನಡೆಸಿದ್ದು, ಸಭೆಯಲ್ಲಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಮಹೇಶ್ ಕುಮಟಳ್ಳಿ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದಾರೆ.

Home add -Advt

ನಿನ್ನೆ ಆಹಾರ ಸಚಿವ ಉಮೇಶ್ ಕತ್ತಿ ಅವರ ಬೆಳಗಾವಿ ನಿವಾಸದಲ್ಲಿ ಜಿಲ್ಲೆಯ ಬಿಜೆಪಿ ನಾಯಕರ ಗೌಪ್ಯ ಸಭೆ ನಡೆದಿತ್ತು. ಆದರೆ ಜಾರಕಿಹೊಳಿ ಸಹೋದರರನ್ನು ಸಭೆಯಿಂದ ದೂರವಿಡಲಾಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಇಂದು ರಮೇಶ್ ಜಾರಕಿಹೊಳಿ ಸಭೆ ನಡೆಸಿದ್ದು, ಸುಮಾರು 2 ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ರಹಸ್ಯ ಸಭೆಗೆ ತಿರುಗೇಟು ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ ಬಿಜೆಪಿಯಲ್ಲಿ ಭಾರೀ ಬೆಳವಣಿಗೆ: ಜಾರಕಿಹೊಳಿ ಬ್ರದರ್ಸ್ ನಿಂದ ಬಿಜೆಪಿಗೆ ಡ್ಯಾಮೇಜ್, ಕಂಟ್ರೋಲ್ ಗೆ ತಂತ್ರಗಾರಿಕೆ ಹೆಣೆದ ನಾಯಕರು

Related Articles

Back to top button