ಪ್ರಗತಿವಾಹಿನಿ ಸುದ್ದಿ, ನವದೆಹಲಿ – ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ಹೈಕೋರ್ಟ್ ಗೆ ಸಲ್ಲಿಸಿದ್ದ ವರದಿಗೆ ಸರ್ವೋಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.
ಎಸ್ಐಟಿ ರಮೇಶ ಜಾರಕಿಹೊಳಿಗೆ ಕ್ಲೀನ್ ಚಿಟ್ ನೀಡಿ ಹೈಕೊರ್ಟ್ ಗೆ ವರದಿ ಬಿ ರಿಪೋರ್ಟ್ ಸಲ್ಲಿಸಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ತ ಯುವತಿ ಸುಪ್ರಿಂ ಕೋರ್ಟ್ ಮೆಟ್ಟಿಲೇರಿದ್ದಳು. ಇದೀಗ ಸುಪ್ರಿಂ ಕೋರ್ಟ್ ತಡೆಯಾಜ್ಞೆ ನಾಡಿದೆ.
ಎಸ್ಐಟಿ ರಚನೆಯೇ ಸರಿಯಲ್ಲ. ತನಿಖೆ ಕೂಡ ಸಮರ್ಪಕವಾಗಿ ನಡೆದಿಲ್ಲ. ಯಾವುದೇ ನಿಯಮಾವಳಿಗಳನ್ನು ಪಾಲಿಸಲಾಗಿಲ್ಲ ಎಂದು ಸಂತ್ರಸ್ತೆ ಪರ ವಕೀಲರು ವಾದಿಸಿದ್ದರು.
ಸುಪ್ರಿಂ ಕೋರ್ಟ್ ತಡೆಯಾಜ್ಞೆಯಿಂದಾಗಿ ರಮೇಶ ಜಾರಕಿಹೊಳಿಗೆ ಹಿನ್ನಡೆಯಾದಂತಾಗಿದೆ.
ಒಂದೇ ಪ್ರಕರಣದಲ್ಲಿ 38 ಅಪರಾಧಿಗಳಿಗೆ ಮರಣದಂಡನೆ, 11 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ