Belagavi NewsBelgaum NewsKannada NewsKarnataka NewsNationalPolitics

*ರಮೇಶ ಜಾರಕಿಹೊಳಿ ಸಿಡಿ ಕೇಸ್ ವಿಚಾರಣೆ ಮುಂದೂಡಿಕೆ*

ಪ್ರಗತಿವಾಹಿನಿ ಸುದ್ದಿ : ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡಿದ್ದ ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅಶ್ಲೀಲ ಸಿ.ಡಿ. ಆರೋಪ ಪ್ರಕರಣದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಡಿ.19ಕ್ಕೆ ಮುಂದೂಡಿ ಆದೇಶಿಸಿದೆ.

ರಮೇಶ್ ಜಾರಕಿಹೊಳಿ ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಿರುವ ಕುರಿತಾದ ಪ್ರಕರಣದ ಕುರಿತೂ ವಿಚಾರಣೆಯನ್ನು ಇಂದು ಕೋರ್ಟ್ ಮುಂದೂಡಿದೆ.

Home add -Advt

ನ್ಯಾ.ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ನಡೆದಿದ್ದು, ರಾಜ್ಯ ಸರ್ಕಾರವು ಇದುವರೆಗೂ ಲಿಖಿತ ವಾದಾಂಶ ಏನೆಂಬುದನ್ನು ಸಲ್ಲಿಸಿಲ್ಲ ಹಾಗೂ ನ್ಯಾಯಾಲಯದ ಹಿಂದಿನ ಆದೇಶಗಳನ್ನು ಸರ್ಕಾರ ಪಾಲಿಸಿಲ್ಲ. ಸೂಚನೆ ಪಡೆಯಲು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರು ಸಮಯ ಕೋರಿದ ಹಿನ್ನೆಲೆಯಲ್ಲಿ ಅರ್ಜಿಯನ್ನು ಮುಂದೂಡಲಾಗಿದೆ.

2021ರಲ್ಲಿ ಅಂದಿನ ಸಚಿವ ರಮೇಶ ಜಾರಕಿಹೊಳಿ ಅಶ್ಲೀಲ ವೀಡಿಯೋ ಹೊರಬಂದು ಭಾರೀ ವಿವಾದ ಸೃಷ್ಟಿಯಾಗಿತ್ತು. ಇದರಿಂದಾಗಿ ಅವರು ಸಚಿವಸ್ಥಾನವನ್ನು ಕಳೆದುಕೊಳ್ಳಬೇಕಾಯಿತು.

Related Articles

Back to top button