Kannada NewsKarnataka NewsLatest

ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಸಹ ರಾಜಿನಾಮೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು:

ಗೋಕಾಕ ಕಾಂಗ್ರೆಸ್ ಶಾಸಕ ರಮೇಶ ಜಾರಕಿಹೊಳಿ ಶಾಸಕ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿದ್ದಾರೆ.

ವಿಜಯನಗರ ಶಾಸಕ ಆನಂದ್ ಸಿಂಗ್  ರಾಜೀನಾಮೆ ನೀಡಿದ ಬೆನ್ನಲ್ಲೆ   ರಮೇಶ್ ಜಾರಕಿಹೊಳಿ ಅವರು ಸಹ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

ಆದರೆ ಇಬ್ಬರ ರಾಜಿನಾಮೆಯೂ ಈವರೆಗೆ ಸ್ವೀಕೃತವಾಗಿಲ್ಲ. 

 ರಮೇಶ್ ಜಾರಕಿಹೊಳಿ  ಕೈಬರಹದಲ್ಲಿ ಬರೆದ ರಾಜೀನಾಮೆ ಪತ್ರವನ್ನು ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ರವಾನಿಸಿದ್ದಾರೆ.  

ರಮೇಶ್ ಜಾರಕಿಹೊಳಿ  ಬಹು ದಿನಗಳಿಂದ  ಕಾಂಗ್ರೆಸ್ ಹಾಗೂ ಮೈತ್ರಿ ಸರ್ಕಾರದ ವಿರುದ್ಧ ಬಂಡಾಯವೆದ್ದಿದ್ದರು.

 
 

Related Articles

Back to top button