ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಸದನದಲ್ಲಿ ಅಕ್ಷಮ್ಯ ಹೇಳಿಕೆ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ವಿಧಾನಸಭೆಯಲ್ಲಿ ಕ್ಷಮೆಯಾಚಿಸಿದ್ದಾರೆ.
ನಿನ್ನೆ ವಿಧಾನಸಭೆಯಲ್ಲಿ ಮಾತನಾಡಿದ್ದ ರಮೇಶ್ ಕುಮಾರ್, ’ಅತ್ಯಾಚಾರ ತಡೆಯಲಾಗದಿದ್ದರೆ ಮಲಗಿ ಆನಂದಿಸಿ’ ಎಂಬ ಒಂದು ಹೇಳಿಕೆಯಿದೆ ಎನ್ನುವ ಮೂಲಕ ವಿವಾದಕ್ಕೀಡಾಗಿದ್ದರು. ಮಾಜಿ ಸ್ಪೀಕರ್ ಹೇಳಿಕೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿತ್ತು. ರಮೇಶ್ ಕುಮಾರ್ ಬಹಿರಂಗ ಕ್ಷಮೆಯಾಚಿಸುವಂತೆ ಪಕ್ಷಾತೀತವಾಗಿ ಒತ್ತಾಯಗಳು ಕೇಳಿಬಂದಿದ್ದವು.
ಇಂದು ವಿಧಾನಸಭಾ ಕಲಾಪ ಆರಂಭವಾಗುತ್ತಿದ್ದಂತೆ ಸದನದಲ್ಲಿ ಮಾತನಾಡಿದ ರಮೇಶ್ ಕುಮಾರ್, ನನ್ನ ಹೇಳಿಕೆಗೆ ನೋವಾಗಿದ್ದರೆ ಕ್ಷಮೆಯಿರಲಿ. ಹೆಣ್ಣಿಗೆ ಅಪಮಾನ ಮಾಡಬೇಕು, ಲಘುವಾಗಿ ಮಾತನಾಡಬೇಕು ಎಂಬ ಉದ್ದೇಶ ನನಗಿಲ್ಲ. ವಿಷಾದ ವ್ಯಕ್ತಪಡಿಸಲು, ಕ್ಷಮೆಯಾಚಿಸಲು ಯಾವುದೇ ಪ್ರತಿಷ್ಠೆಯೂ ಇಲ್ಲ. ಹೆಸರಾಂತ ಇಂಗ್ಲೀಷ್ ಚಿಂತಕರ ಹೇಳಿಕೆಯನ್ನು ಉಲ್ಲೇಖಿಸಿದ್ದೆ ಅಷ್ಟೇ. ಈ ವಿಚಾರ ಇಲ್ಲಿಗೆ ಬಿಟ್ಟು ಕಲಾಪ ಮುಂದುವರೆಸೋಣ ಎಂದರು.
ನನ್ನ ಹೇಳಿಕೆಯಿಂದ ದೇಶದ ಯಾವುದೇ ಮೂಲೆಯಲ್ಲಿರುವ ಹೆಣ್ಣುಮಕ್ಕಳಿಗೆ ನೋವಾಗಿದ್ದರೆ ಕ್ಷೆಮೆಯಿರಲಿ. ಮುಕ್ತ ಮನಸ್ಸಿನಿಂದ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಹೇಳಿದರು.
ರಮೇಶ್ ಕುಮಾರ್ ಹೇಳಿಕೆ ಅಕ್ಷಮ್ಯ ಅಪರಾಧ; ಯಡಿಯೂರಪ್ಪ ಆಕ್ರೋಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ