ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬರೋಬ್ಬರಿ ಐದು ತಿಂಗಳ ಬಳಿಕ ರಾಷ್ಟ್ರೀಯ ತನಿಖಾ ದಳ-ಎನ್ಐಎ ಶಂಕಿತ ಆರೋಪಿಗಳನ್ನು ಸ್ಥಳಮಹಜರಿಗೆ ಕರೆತಂದಿದೆ.
ಮಾರ್ಚ್ 1ರಂದು ರಾಮೇಶ್ವರಂ ಕೆಫೆಯಲ್ಲಿ ಮಧ್ಯಾಹ್ನ ಸ್ಫೊಟ ಸಂಭವಿಸಿತ್ತು. ಮಹಿಳೆ ಸೇರಿದಂತೆ ಹಲವರು ಗಾಯಗೊಂಡಿದ್ದರು. ಈ ಪ್ರಕರಣದ ಶಂಕಿತ ಆರೋಪಿಗಳನ್ನು ಎನ್ ಐಎ ಅಧಿಕಾರಿಗಳು ಇಂದು ಸ್ಥಳ ಮಹಜರಿಗಾಗಿ ರಾಮೇಶ್ವರಂ ಕೆಫೆಗೆ ಕರೆತಂದಿದ್ದಾರೆ.
ರಾಮೇಶ್ವರಂ ಕೆಫೆ ಸ್ಫೋಟದ ಪ್ರಮುಖ ಆರೋಪಿ ಕೋಲ್ಕತ್ತಾ ಮೂಲದ ಮುಸಾವಿರ್ ಹುಸೇನ್ ಶಾಜಿದ್, ಅಬ್ದುಲ್ ಮಥೀನ್ ಅಹಮದ್ ತಾಹಾ ಕರೆತಂದು ಸ್ಥಳ ಮಹಜರು ಮಾಡಲಾಗಿದೆ. ಸ್ಥಳ ಮಹಜರು ಹಿನ್ನೆಲೆಯಲ್ಲಿ ವೈಟ್ ಫೀಲ್ಡ್ ವಿಭಾಗದ ಪೊಲೀಸರನ್ನು ರಾಮೇಶ್ವರಂ ಕೆಫೆ ಸುತ್ತಮುತ್ತ ಭದ್ರತೆಗಾಗಿ ನಿಯೋಜಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ