ಎನ್ಐಎ ಚಾರ್ಜ್ ಶೀಟ್ ನಲ್ಲಿ ಶಾಕಿಂಗ್ ಮಾಹಿತಿ
ಪ್ರಗತಿವಾಹಿನಿ ಸುದ್ದಿ: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಚ್ಚಿ ಬೀಳಿಸುವಂತಹ ಮಾಹಿತಿ ಎನ್ಐಎ ಚಾರ್ಜ್ ಶೀಟ್ ನಲ್ಲಿ ಬಹಿರಂಗವಾಗಿದೆ.
ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧ ತನಿಖೆ ನಡೆಸಿದ್ದ ರಾಷ್ಟ್ರೀಯ ತನಿಖಾ ದಳ-ಎನ್ಐಎ ನಾಲ್ವರು ಆರೋಪಿಗಳ ವಿರುದ್ಧ ಇಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದೆ. ಆರೋಪಿಗಳಾದ ಅಬ್ದುಲ್ ಮತಿನ್ ತಾಹಾ, ಮುಸಾವಿರ್ ಹುಸೇನ್, ಮಾಜ್ ಮುನೀರ್ ಅಹ್ಮದ್ ಹಾಗೂ ಮುಝಮ್ಮಿಲ್ ವಿರುದ್ಧ ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ.
ಚಾರ್ಜ್ ಶೀಟ್ ನಲ್ಲಿ ಆರೋಪಿಗಳು ಬೆಂಗಳೂರಿನ ಬಿಜೆಪಿ ಕಚೇರಿ ಸ್ಫೋಟಕ್ಕೆ ಪ್ಲಾನ್ ಮಾಡಿದ್ದರು. ಆದರೆ ಅವರ ಪ್ರಯತ್ನ ವಿಫಲವಾಗಿದ್ದಕ್ಕೆ ರಾಮೇಶ್ವರಂ ಕೆಫೆ ಸ್ಫೋಟಿಸಿದ್ದಾಗಿ ಉಲ್ಲೇಖಿಸಲಾಗಿದೆ.
ಬೆಂಗಳೂರಿನ ಕುಂದಲಹಳ್ಳಿಯಲ್ಲಿ ಮಾ.1ರಂದು ಮಧ್ಯಾಹ್ನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ ನಡೆದಿತ್ತು. ಊಟಕ್ಕೆಂದು ಬಂದ ದುಷ್ಕರ್ಮಿ ಈ ಕೃತ್ಯವೆಸಗಿ ಎಸ್ಕೇಪ್ ಆಗಿದ್ದ. ಘಟನೆಯಲ್ಲಿ ಒಂಭತ್ತು ಜನರು ಗಾಯಗೊಂಡಿದ್ದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ