Kannada NewsKarnataka NewsLatest

*ರಾಮೇಶ್ವರಂ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್ ಐ ಎ ಅಧಿಕರಿಗಳು ಬಂಧಿಸಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಮಾರ್ಚ್ ೧ರಂದು ಮಧ್ಯಾಹ್ನ ಬಾಂಬ್ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಒಂಭತ್ತು ಜನರು ಗಾಯಗೊಂಡಿದ್ದರು. ಪ್ರಕರಣವನ್ನು ಎನ್ ಐಎ ತನಿಖೆಗೆ ವಹಿಸಲಾಗಿತ್ತು.

Home add -Advt

ಇದೀಗ ಪ್ರಕರಣದ ಪ್ರಮುಖ ಆರೋಪಿಯನ್ನು ಎನ್ ಐಎ ಅಧಿಕರಿಗಳು ಬಂಧಿಸಿದ್ದಾರೆ. ಬಂಧಿತನನ್ನು ಮುಜಾಮುಲ್ ಶರೀಫ್ ಎಂದು ಗುರುತಿಸಲಾಗಿದೆ.

ಎನ್ ಐಎ ತಂಡ ಕರ್ನಾಟಕ, ತಮಿಳುನಾಡು ಹಾಗೂ ಉತ್ತರ ಪ್ರದೇಶದ ಹಲವೆಡೆ ದಾಳಿ ನಡೆಸಿದ ಬಳಿಕ ಮುಜಾಮುಲ್ ಶರೀಫ್ ಎಂಬಾತನನ್ನು ಬಂಧಿಸಿದೆ. ಪ್ರಕರಣದಲ್ಲಿ ಬಂಧಿತರಾಗಿರುವ ಇತರ ಇಬ್ಬರು ಆರೋಪಿಗಳಿಗೆ ಮುಜಾಮುಲ್ ಕೀ ಕಾನ್ಸಪರೇಟ್ ಆಗಿದ್ದ ಎಂದು ಎನ್ ಐಎ ತಿಳಿಸಿದೆ.

Related Articles

Back to top button