Kannada NewsKarnataka NewsLatest

*ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್; ಎ1 ಆರೋಪಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಎನ್ ಐ ಎ ಇಬ್ಬರನ್ನು ಬಂಧಿಸಿದ್ದು, ಹಲವರನ್ನು ವಶಕ್ಕೆ ಪಡೆದುಕೊಂಡಿದೆ. ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಟ್ರಯಲ್ ಬ್ಲಾಸ್ಟ್ ಪ್ರಕರಣದಲ್ಲಿ ಜೈಲು ಸೇರಿದ್ದ ಮಾಝ್ ಮುನೀರ್ ನನ್ನೇ ಎನ್ ಐಎ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಮೊದಲ ಆರೋಪಿಯನ್ನಾಗಿ ಮಾಡಿದೆ.

ಜೈಲು ಸೇರಿವ ಮೊದಲೇ ಆತ ಕೆಲವೆಡೆ ಸ್ಫೋಟದ ಪ್ಲಾನ್ ಮಾಡಿದ್ದರಿಂದ ಆತನನ್ನೇ ಮೊದಲ ಆರೋಪಿಯನ್ನಾಗಿ ಮಾಡಿದೆ ಎಂದು ಹೇಳಲಾಗುತ್ತಿದೆ. ಇನ್ನು ಎರಡು ಹಗೂ ಮೂರನೇ ಆರೋಪಿಗಳನ್ನಾಗಿ ಮತೀನ್, ಮುಸಾವೀರ್ ಹೆಸರನ್ನು ಉಲ್ಲೇಖಿಸಲಾಗಿದೆ ಎನ್ನಲಾಗಿದೆ. ನಾಲ್ಕನೇ ಆರೋಪಿಯ ಹೆಸರನ್ನು ಉಲ್ಲೇಖಿಸಿ ಕೋರ್ಟ್ ಗೆ ಕಳುಹಿಸಲಾಗಿದೆ ಎಂದು ವರದಿಯಾಗಿದ್ದು, ಸ್ಪಷ್ಟ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

Home add -Advt
https://pragativahini.com/rameshwaram-cafe-bomb-blast-casebjp-ledernia-custody

Related Articles

Back to top button