Kannada NewsKarnataka NewsLatest
*ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್: ಬಂಧಿತ ಉಗ್ರರು ಎನ್ಐಎ ಕಸ್ಟಡಿಗೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಂಧಿತ ಇಬ್ಬರು ಉಗ್ರರನ್ನು ಎನ್ ಐಎ ಅಧಿಕಾರಿಗಳು ಜಡ್ಜ್ ಮುಂದೆ ಹಾಜರುಪಡಿಸಿ ಕಸ್ಟಡಿಗೆ ಪಡೆದುಕೊಂಡಿದೆ.
ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ತಲೆಮರೆಸಿಕೊಂಡಿದ್ದ ಉಗ್ರರನ್ನು ಎನ್ ಐಎ ಅಧಿಕಾರಿಗಳು ಬಂಧಿಸಿದ್ದರು. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಬಾಂಬರ್ ಮುಸ್ಸಾವೀರ್ ಹುಸೇನ್ ಶಾಜಿಬ್ ಹಾಗೂ ಸ್ಫೋಟದ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾನನ್ನು ಕೋಲ್ಕತ್ತಾದಿಂದ ಬೆಂಗಳೂರಿಗೆ ಕರೆ ತರಲಾಗಿತ್ತು.
ಇಂದು ಬೆಂಗಳೂರಿನ ಎನ್ ಐಎ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಉಗ್ರರನ್ನು ಹಾಜರು ಪಡಿಸಲಾಗಿದ್ದು, 10 ದಿನಗಳ ಕಾಲ ನ್ಯಾಯಾಧೀಶರು ಎನ್ಐಎ ಕಸ್ಟಡಿಗೆ ನೀಡಿ ಆದೆಶ ಹೊರಡಿಸಿದ್ದಾರೆ.




