*ರವೆ ಇಡ್ಲಿ ತಿಂದು ಹೋಟೆಲ್ ನಲ್ಲಿ ಟೈಮರ್ ಬಾಂಬ್ ಇಟ್ಟು ಹೋದ ಆರೋಪಿ; ಡಿಸಿಎಂ ಮಾಹಿತಿ*
ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಿನ್ನೆ ಮಧ್ಯಾಹ್ನ ಸಂಭವಿಸಿದ ಭೀಕರ ಬಾಂಬ್ ಸ್ಫೋಟದಲ್ಲಿ 9 ಜನರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಗೃಹ ಸಚಿವ ಪರಮೇಶ್ವರ್ ಹಾಗೂ ಡಿಸಿಎಂ ಡಿ.ಕೆ.ಶಿವಕುಮರ್, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟ ಬಾಂಬ್ ಸ್ಫೋಟ ಎಂಬುದನ್ನು ಖಚಿತಪಡಿಸಿದ್ದಾರೆ. ಟೈಮರ್ ಇಟ್ಟು ಸ್ಫೋಟಿಸಲಾಗಿದೆ . ಆರೋಪಿಯನ್ನು ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ.
ಮಧ್ಯಾಹ್ನ 12 ಗಂಟೆ ಸುಮಾರಿಗೆ 30 ವರ್ಷದ ವ್ಯಕ್ತಿ ಬ್ಯಾಗ್ ತಂದಿಟ್ಟಿದ್ದ ನಂತರ ಟೋಕನ್ ತೆಗೆದುಕೊಂಡು ರವೆ ಇಡ್ಲಿ ಸೇವಿಸಿ ಹೋಗಿದ್ದಾನೆ. ಟೈಮರ್ ಇಟ್ಟು ಮಾಧ್ಯಾಹ್ನ 12:55ಕ್ಕೆ ಕಡಿಮೆ ತೀವ್ರತೆಯ ಬಾಂಬ್ ಸ್ಫೋಟಗೊಂಡಿದೆ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ