Kannada NewsKarnataka NewsLatestPolitics

*ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ; ಶಂಕಿತನ ಸುಳಿವು ಪತ್ತೆ; ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನ ಸುಳಿವು ಸಿಕ್ಕಿದ್ದು, ಶೀಘ್ರದಲ್ಲಿ ಬಂಧಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಶೀಘ್ರದಲ್ಲಿಯೇ ಶಂಕಿತ ಉಗ್ರನನ್ನು ಬಂಧಿಸಲಾಗುವುದು. ಈಗಾಗಲೇ ಶಂಕಿತ ಉಗ್ರನ ಸುಳಿವನ್ನು ಪೊಲೀಸರು ಪತ್ತೆ ಮಾಡಿದ್ದಾರೆ ಎಂದರು.

Home add -Advt

ಪ್ರಕರಣ ಸಂಬಂಧ ಸಿಸಿಬಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ತಿಳಿಸಿದರು.

ಬೆಂಗಳೂರಿನ ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಬಾಂಬ್ ಸ್ಫೋಟ ಪ್ರಕರಣದಲ್ಲಿ 9 ಜನರು ಗಾಯಗೊಂಡಿದ್ದರು. ಮೂವರು ಡಿಸ್ಚಾರ್ಜ್ ಆಗಿದ್ದು, ಉಳಿದವರಿಗೆ ಬೆಂಗಳೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದೆ.

Related Articles

Back to top button