ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನೋರ್ವನನ್ನು ಬಳ್ಳಾರಿಯಲ್ಲಿ ಎನ್ ಐ ಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಬಳ್ಳಾರಿಯಲ್ಲಿ ಶಬ್ಬೀರ್ ಎಂಬ ಶಂಕಿತನನ್ನು ವಶಕ್ಕೆ ಪಡೆದಿರುವ ಎನ್ ಐ ಎ ಅಧಿಕಾರಿಗಳು ವಿಚಾರಣೆಗಾಗಿ ಬೆಂಗಳೂರಿಗೆ ಕರೆ ತರುತ್ತಿದ್ದಾರೆ.
ಮಾರ್ಚ್ 1ರಂದು ಬೆಂಗಳೂರಿನ ಕುಂದಲಹಳ್ಳಿಯಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ನಡೆದಿತ್ತು. ಪ್ರಕರಣವನ್ನು ಸರ್ಕಾರ ಎನ್ ಐಎ ತನಿಖೆಗೆ ವಹಿಸಿದೆ. ಬಾಂಬರ್ ಬಗ್ಗೆ ತೀವ್ರ ಶೋಧ ನಡೆಸಲಾಗುತ್ತಿದ್ದರೂ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇದೀಗ ಬಳ್ಳಾರಿಯಲ್ಲಿ ಓರ್ವ ಶಂಕಿತನನ್ನು ಎನ್ ಐಎ ವಶಕ್ಕೆ ಪಡೆದಿದ್ದು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ