*ರಾಮೇಶ್ವರಂ ಕೆಫೆ ಸ್ಫೋಟದ ಬಗ್ಗೆ ತನಿಖೆ ಪ್ರಗತಿಯಲ್ಲಿದೆ, ಆತಂಕ ಬೇಡ: ಡಿಸಿಎಂ ಡಿ.ಕೆ. ಶಿವಕುಮಾರ್*
ಪ್ರಗತಿವಾಹಿನಿ ಸುದ್ದಿ: “ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟದ ಬಗ್ಗೆ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಬೆಂಗಳೂರಿನ ಯಾರೂ ಆತಂಕ ಪಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಅವರು ಶಿವಕುಮಾರ್ ತಿಳಿಸಿದರು.
ಕುಣಿಗಲ್ ನಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು ಶುಕ್ರವಾರ ಹೇಳಿದ್ದಿಷ್ಟು;
“ಈ ಸ್ಫೋಟವನ್ನು ಯಾರು, ಯಾವ ಕಾರಣಕ್ಕೆ ಮಾಡಿದ್ದಾರೆ. ಇದು ವ್ಯಾಪಾರದ ವೈರಿಗಳೇ ಮಾಡಿದ್ದೇ ಅಥವಾ ಬೇರೆ ಉದ್ದೇಶದಿಂದ ಮಾಡಿದ್ದಾರೆಯೇ ಎಂದು ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ.
ರಾಮೇಶ್ವರಂ ಕೆಫೆ ಸುತ್ತಮುತ್ತಲ ಪ್ರದೇಶದ ಸಿಸಿಟಿವಿ ಕ್ಯಾಮೆರಾಗಳ ವಿಡಿಯೋ ಇದೆ. ಸುಮಾರು 2 ಕಿ.ಮೀ. ವ್ಯಾಪ್ತಿಯಲ್ಲಿ ಯಾರು ಬಂದು ಹೋಗಿದ್ದಾರೆ ಎಂಬ ಬಗ್ಗೆ ಪರಿಶೀಲನೆ ನಡೆದಿದೆ. ಸದ್ಯಕ್ಕೆ ಯಾರಿಗೂ ತೊಂದರೆ ಆಗಿಲ್ಲ. ಬೆಂಗಳೂರಿನಲ್ಲಿ ಯಾರೂ ಆತಂಕ ಪಡುವ ಅಗತ್ಯವಿಲ್ಲ. ಕೆಲವರು ಶಾಂತಿ ಕದಡಲು ಪ್ರಯತ್ನ ಮಾಡುತ್ತಿದ್ದಾರೆ. ನಾವು ರಕ್ಷಣೆ ನೀಡುತ್ತೇವೆ” ಎಂದು ತಿಳಿಸಿದರು.
ಈ ಸ್ಫೋಟದಲ್ಲಿ ಐಇಡಿ ಬಳಸಲಾಗಿದೆ ಎಂಬುದರ ಬಗ್ಗೆ ಕೇಳಿದಾಗ, “ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿ ಪಡೆದು ನಂತರ ಪ್ರತಿಕ್ರಿಯೆ ನೀಡುತ್ತೇನೆ” ಎಂದು ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ