
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಇಬ್ಬರು ಆರೋಪಿಗಳನ್ನು ಎನ್ ಐ ಎ ತಂಡ ಪಶ್ಚಿಮ ಬಂಗಾಳದಲ್ಲಿ ಬಂಧಿಸಿದೆ.
ಬಾಂಬರ್ ಹಾಗೂ ಮಾಸ್ಟರ್ ಮೈಡ್ ಇಬ್ಬರನ್ನು ಬಂಧಿಸಲಾಗಿದೆ. ಬಾಂಬರ್ ಮುಸ್ಸಾವೀರ್ ಹುಸೇನ್ ಹಾಗೂ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹಾ ನನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ.
ಖಚಿತ ಮಾಹಿತಿ ಹಾಗೂ ಗುಪ್ತಚರ ಇಲಾಖೆಗೆ ಸಿಕ್ಕ ಸುಳಿವಿನ ಆಧಾರದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಬಾಂಬರ್ ಮುಜಾವೀರ್ ಧರಿಸಿದ್ದ ಕ್ಯಾಪ್ ನಿಂದಾಗಿಯೇ ಆತನನ್ನು ಪತ್ತೆ ಮಾಡಲಾಗಿದೆ. ವಶಕ್ಕೆ ಪಡೆದಿರುವ ಇಬ್ಬರನ್ನು ಪಶ್ಚಿಮ ಬಂಗಾಳದ ಪರಗಣ ಎನ್ ಐಎ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ