ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ಕುಂದಲಹಳ್ಳಿ ಬಳಿ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳ ತನಿಖೆ ಮತ್ತಷ್ಟು ಚುರುಕುಗೊಳಿಸಿದೆ. ರಾಜ್ಯದ ಐದು ಸ್ಥಳಗಳಲ್ಲಿ ಎನ್ ಐ ಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು, ಶಿವಮೊಗ್ಗ, ಇಂದಿರಾನಗರ ಸೇರಿದಂತೆ 5 ಕಡೆಗಳಲ್ಲಿ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿ ಶಂಕಿತರ ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ಶನಿವಾರ ಎನ್ ಐ ಎ ಅಧಿಕಾರಿಗಳು ಬೆಂಗಳೂರಿನ ಇಬ್ಬರು ಶಂಕಿತರನನ್ನು ವಶಕ್ಕೆ ಪಡೆದುಕೊಂಡಿತ್ತು. ಈ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ಶಿವಮೊಗ್ಗದ ತೀರ್ಥಹಳ್ಳಿಯ ಸೊಪ್ಪುಗುಡ್ದೆ, ಬೆಟಮಕ್ಕಿ, ಬೆಂಗಳೂರು ಹಾಗೂ ತಮಿಳುನಾಡಿನ ಚೆನ್ನೈ ನಲ್ಲಿಯೂ ದಾಳಿ ನಡೆಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ