
ಪ್ರಗತಿವಾಹಿನಿ ಸುದ್ದಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡನೊಬ್ಬನನ್ನು ಎನ್ ಐ ಎ (ರಾಷ್ಟ್ರೀಯ ತನಿಖಾ ದಳ) ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ ಎಂದು ಹೇಳಲಾಗುತ್ತಿದೆ.
ಈ ಕುರಿತು ಸಚಿವ ದಿನೇಶ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ. ಬಿಜೆಪಿಯ ಮುಖಂಡನನ್ನು ವಶಕ್ಕೆ ಪಡೆದಿರುವುದು ಈ ಪ್ರಕರಣದಲ್ಲಿ ಬಿಜೆಪಿಯ ಕೈವಾಡ ಇದೆ ಎನ್ನುವ ಅರ್ಥ ನೀಡುತ್ತದೆಯಲ್ಲವೇ ಎಂದು ಪ್ರಶ್ನಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ವ್ಯಕ್ತಿಯನ್ನು ಎನ್ ಐಎ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಮೊಬೈಲ್ ಮಾರಾಟ ಅಂಗಡಿ ನಡೆಸುತ್ತಿದ್ದ ಆತನನ್ನು ವಶಕ್ಕೆ ಪಡೆದಿದ್ದಾರೆ ಎನ್ನುವ ಸುದ್ದಿ ಹರಡಿದೆ. ವಶಕ್ಕೆ ಪಡೆಯಲಾದ ವ್ಯಕ್ತಿಯನ್ನು ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿದ್ದಾರೆ. ಆತನ ಅಂಗಡಿಯಿಂದ ಆರೋಪಿಗಳು ಮೊಬೈಲ್ ಖರೀದಿಸಿದ್ದಾರೆ, ಈ ಹಿನ್ನೆಲೆಯಲ್ಲಿ ಆತನನ್ನು ವಿಚಾರಣೆಗೊಳಪಡಿಸಲಾಗಿದೆ ಎನ್ನುವ ಮಾಹಿತಿ ಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ