
ಪ್ರಗತಿವಾಹಿನಿ ಸುದ್ದಿ: ಮಾಧ್ಯಮ ದಿಗ್ಗಜ ರಾಮೋಜಿ ರಾವ್ (87) ಶನಿವಾರ ನಿಧನರಾಗಿದ್ದಾರೆ. ಹೈದರಾಬಾದ್ ನ ಖಾಸಗಿ ಆಸ್ಪತ್ರೆಯೊಂದರಲ್ಲಿ ಅವರು ಶನಿವಾರ ಮುಂಜಾನೆ ನಿಧನ ಹೊಂದಿದ್ದಾರೆ.
ರಾಮೋಜಿ ಫಿಲ್ಮ್ ಸಿಟಿ ಸೇರಿದಂತೆ ರಾಮೋಜಿ ಸಮೂಹ ಸಂಸ್ಥೆಗಳ ಒಡೆತನದಿಂದ ಅವರು ಮನೋರಂಜನಾ ಹಾಗೂ ಮಾಧ್ಯಮ ಕ್ಷೇತ್ರದಲ್ಲಿ ಖ್ಯಾತಿ ಗಳಿಸಿದ್ದರು. ಇತ್ತೀಚಿಗಷ್ಟೇ ಅನಾರೋಗ್ಯದ ಕಾರಣದಿಂದ ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಸ್ಟೆಂಟ್ ಅಳವಡಿಕೆ ಮಾಡಲಾಗಿತ್ತು.
ಚಿತ್ರರಂಗದ ಗಣ್ಯರೂ ಸೇರಿದಂತೆ, ರಾಜಕಾರಣಿಗಳು, ಸೆಲೆಬ್ರಿಟಿಗಳು ಇಂದು ರಾಮೋಜಿ ರಾವ್ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ. ಈನಾಡು, ಈಟಿವಿ, ಈಟಿವಿ ಭಾರತ್, ಮಾರ್ಗದರ್ಶಿ ಚಿಟ್ ಫಂಡ್ ಮುಂತಾದ ಸಂಸ್ಥೆಗಳು ಅವರ ಒಡೆತನದಲ್ಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ