
ಪ್ರಗತಿವಾಹಿನಿ ಸುದ್ದಿ: ನಟ ದರ್ಶನ್ ಅಭಿಮಾನಿಗಳ ಹೆಸರಲ್ಲಿ ನಟಿ, ಮಾಜಿ ಸಂಸದೆ ರಮ್ಯಾ ಅವರಿಗೆ ಅಶ್ಲೀಲ ಸಂದೇಶ ರವಾನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಓರ್ವನನ್ನು ವಶಕ್ಕೆ ಪಡೆದಿದ್ದಾರೆ.
ನಟಿ ರಮ್ಯಾ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರು ಸಿಸಿಬಿ ಸೈಬರ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಓರ್ವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ಮೂಲಕ ಉಳಿದ ಕಿಡಿಗೇಡಿಗಳಿಗೂ ಭಯ ಶುರುವಾಗಿದೆ.
ನಟಿ ರಮ್ಯಾ ದೂರು ನೀಡುವ ವೇಳೆ 43 ಅಕೌಂಟ್ ಗಳ ಹೆಸರು ಉಲ್ಲೇಖಿಸಿ ದೂರು ನೀಡಿದ್ದಾರೆ. ಬಳಿಕ ಪೊಲೀಸರ ಮುಂದೆ ಹೇಳಿಕೆ ನೀಡುವ ವೇಳೆ ಮತ್ತೆ ಮೂರು ಅಕೌಂಟ್ ಹೆಸರನ್ನು ಸೇರಿಸಿ ಒಟ್ಟು 48 ಅಕೌಂಟ್ ಗಳ ವಿರುದ್ಧ ದೂರು ದಾಖಲಿಸಿದ್ದರು.