Latest

*ಮುಖ್ಯಮಂತ್ರಿ ಆಯ್ಕೆ ಬಗ್ಗೆ ಅಂತಿಮ ನಿರ್ಧಾರವಾಗಿಲ್ಲ; ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ ಎಂದ ರಣದೀಪ್ ಸಿಂಗ್ ಸುರ್ಜೇವಾಲ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಈವರೆಗೂ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ, ಸುಳ್ಳು ಸಿದ್ದಿಗಳಿಗೆ ಕಿವಿಗೊಡಬೆಡಿ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ರಣದೀಪ್ ಸುರ್ಜೆವಾಲಾ, ಇಂದು ಸಂಜೆ ಅಥವಾ ನಾಳೆ ಸಿಎಂ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೇ ಘೋಷಣೆ ಮಾಡಲಿದ್ದಾರೆ. ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಇಬ್ಬರೂ ರಾಹುಲ್ ಗಾಂಧಿಯವರನ್ನು ಭೇಟಿಯಾಗಿದ್ದಾರೆ. ಅವಿರೋಧವಾಗಿ ಸಿಎಲ್ ಪಿ ನಾಯಕನನ್ನು ಆಯ್ಕೆ ಮಾಡಲು ಯತ್ನಿಸುತ್ತಿದ್ದೇವೆ. ಮಲ್ಲಿಕಾರ್ಜುನ ಖರ್ಗೆ ಅವರು ಸಿಎಂ ಆಯ್ಕೆ ಮಾಡಲಿದ್ದಾರೆ.ಎಂದರು.

ಸಿಎಂ ಆಯ್ಕೆ ಅಂತಿಮವಾಗಿಲ್ಲ. ಆದರೆ ಕೆಲ ಮಾಧ್ಯಮಗಳಲ್ಲಿ ಸುಳ್ಳು ಸುದ್ದಿ ಹರಡಲಾಗುತ್ತಿದೆ. ಯಾರೂ ಕೂಡ ಊಹಾಪೂಹಗಳಿಗೆ, ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ. ಸಿಎಂ ಆಯ್ಕೆ, ಪ್ರಮಾಣವಚನದ ಬಳಿಕ ಸಂಪುಟ ರಚನೆಯಾಗಲಿದೆ ಎಂದು ಹೇಳಿದರು.

Home add -Advt

ಇನ್ನು ಕಾಂಗ್ರೆಸ್ ನಲ್ಲಿ ಯಾವುದೇ ಸಮಸ್ಯೆಗಳೂ ಇಲ್ಲ. ಬಿಜೆಪಿ ನಾಯಕರು ಮಾಡುತ್ತಿರುವ ಆರೋಪಗಳಿಗೆ ಯಾವುದೆ ಮಹತ್ವ ಬೇಡ. ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಇಂದು ಸಂಜೆ ಅಥವಾ ನಾಳೆಯೊಳಗಾಗಿ ನೂತನ ಸಿಎಂ ಆಯ್ಕೆಯಾಗಲಿದೆ ಎಂದು ಹೇಳಿದರು.

https://pragati.taskdun.com/rahul-gandhisiddaramaiahmeet/


Related Articles

Back to top button