Belagavi NewsBelgaum NewsPolitics

*ಕರ್ನಾಟಕಕ್ಕೆ ಖಾಲಿ ಚೊಂಬು ಕೊಟ್ಟಿರುವ ಪ್ರಧಾನಿ ಮೋದಿ ಯಾವ ಮುಖವಿಟ್ಟುಕೊಂಡು ಮತ ಕೇಳುತ್ತಿದ್ದಾರೆ? ರಣದೀಪ್ ಸುರ್ಜೇವಾಲಾ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಹೊಸ ಈಸ್ಟ್ ಇಂಡಿಯಾ ಕಂಪ‌ನಿ. ಹಿಂದೂಸ್ತಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇದೇ ಈಸ್ಟ್ ಇಂಡಿಯಾ ಕಂಪನಿ ಪಾಲಿಸಿ ನಡೆಸುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ವಾಗ್ದಾಅಳಿ ನಡೆಸಿದ್ದಾರೆ.

ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ರಣದೀಪ್ ಸುರ್ಜೇವಾಲಾ, ಪ್ರಧಾನಿ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕರ್ನಾಟಕ ಜನರಿಗೆ ಅನ್ಯಾಯ ಮಾಡಿದ್ದಾರೆ. ಅವರಿಗೆ ಇಲ್ಲಿಗೆ ಬಂದು ಮತಕೇಳುವ ಹಕ್ಕಿಲ್ಲ. ಬಿಜೆಪಿ ಸೋತಿದ್ದಕ್ಕೆ ಮೋದಿ ಕನ್ನಡಗರ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

ಕರ್ನಾಟಕಕ್ಕೆ ಅನ್ಯಾಯ ಮಾಡಿ ಕಾಲಿ ಚೊಂಬು ನೀಡಿರುವ ಪ್ರಧಾನಿ ನರೇಂದ್ರ ಮೋದಿಗೆ ಇಲ್ಲಿಗೆ ಬರುವ ನೈತಿಕತೆ ಇಲ್ಲ ಎಂದರು.

ಕರ್ನಾಟಕದ ವಿರೋಧಿ ಎನ್ ಡಿಎ ಪಕ್ಷ ನಡೆಯುತ್ತಿದೆ. ರಾಜ್ಯ ಸರಕಾರದ ವಿರುದ್ಧ ‌ಮೋದಿ ಹೊಟ್ಟೆ ಕಿಚ್ಚು ಪಡುತ್ತಿದ್ದಾರೆ. ಕಳೆದ‌ ಡಿಸೆಂಬರ್ ನಲ್ಲಿ ಬರ ಪರಿಹಾರ ನೀಡುವಂತೆ ರಾಜ್ಯ ಕಾಂಗ್ರೆಸ್ ಸರಕಾರ ಮನವಿ‌ ಮಾಡಿದರೂ ನಮ್ಮ ರಾಜ್ಯದ ಸಚಿವರಿಗೆ ಕೇಂದ್ರ ಸರಕಾರ ಸರಿಯಾಗಿ ಸ್ಪಂದಿಸಲಿಲ್ಲ ಎಂದರು.

ರಾಜ್ಯಕ್ಕೆ ನ್ಯಾಯಸಮ್ಮತವಾದ 18, 172 ಕೋಟಿ ರೂ.ಗಳನ್ನು ಎನ್ ಡಿಆರ್ ಎಫ್ ನಲ್ಲಿ ಪರಿಹಾರ ಕೇಳಿತ್ತು. ಕಳೆದ ಆರುವರೆ ತಿಂಗಳಿನಿಂದ ಮೋದಿ ಸರಕಾರ ಅನುದಾನ ಕೊಟ್ಟಿಲ್ಲ. ಕೇಂದ್ರ ಸರಕಾರ ತಾರತಮ್ಯ ಮಾಡುತ್ತಿರುವ ಕಾರಣಕ್ಕೆ ರಾಜ್ಯ ಕಾಂಗ್ರೆಸ್ ಸರಕಾರ ಸುಪ್ರೀಂ ಕೋರ್ಟ್ ಮೊರೆ ಹೋಗುವ ಪರಿಸ್ಥಿತಿ ಎದುರಾಯಿತು ಎಂದರು.

ಕರ್ನಾಟಕದಲ್ಲಿ ಮೇಕೆದಾಟು ಹಾಗೂ ಕಳಸಾ ಬಂಡೂರಿ ಯೋಜನೆ ಅನುಷ್ಠಾನಕ್ಕೆ ಕಳೆದೊಂದು ವರ್ಷದಿಂದ ಜಾರಿಗೊಳಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಅವರ ಜೇಬಿನಲ್ಲಿಯೇ ಚುನಾವಣೆಯ ಆಯೋಗ ಇದೆ. ಆದರೂ‌‌ ಚುನಾವಣೆಯಲ್ಲಿ ‌ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಈ ಚುನಾವಣೆಯಲ್ಲಿ ‌ಮೋದಿಗೆ ಹೆದರಿಕೆ ಪ್ರಾರಂಭವಾಗಿದೆ. ಮಖದಲ್ಲಿ‌ ನಗು ಕಾಣಿಸುತ್ತಿಲ್ಲ. ಯಾವ ಮುಖ ಇಟ್ಟುಕೊಂಡು ಚುನಾವಣೆ ಎದುರಿಸುತ್ತಾರೆ ಎಂದು ಪ್ರಶ್ನಿಸಿದರು.

ನೇಹಾ ಕೊಲೆಯ ಆರೋಪಿಯನ್ನು ಈಗಾಗಲೇ ಬಂಧಿಸಲಾಗಿದೆ. ರಾಜ್ಯ ಸರಕಾರ ತನಿಖೆಯನ್ನು ಚುರುಕುಗೊಳಿಸಿದೆ. ವಿಶೇಷ ನ್ಯಾಯಾಲಯ ಸ್ಥಾಪಿಸುವ ಮೂಲಕ ತ್ವರಿತವಾಗಿ ಆಕೆಯ ಕುಟುಂಬಕ್ಕೆ ನ್ಯಾಯ ಕೊಡಿಸುವ ಕೆಲಸವಾಗುತ್ತಿದೆ. ಆದರೆ ಬಿಜೆಪಿಯವರು ಸಾವಿನಲ್ಲಿಯೂ ರಾಜಕೀಯ ಮಾಡುತ್ತಿದ್ದಾರೆ ಎಂದು ಹರಿಹಾಯ್ದರು.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಬೆಳಗಾವಿ ಗ್ಯಾರಂಟಿ ಯೋಜನೆಯ ಪ್ರಾಧಿಕಾರದ ಅಧ್ಯಕ್ಷ ವಿನಯ ನಾವಲಗಟ್ಟಿ, ಶಾಸಕರಾದ ಲಕ್ಷ್ಮಣ ಸವದಿ, ಗಣೇಶ ಹುಕ್ಕೇರಿ, ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related Articles

Back to top button