ಗೊಂದಲಗಳಿಗೆ ತೆರೆ
ಪ್ರಗತಿವಾಹಿನಿ ಸುದ್ದಿ: ರಾಜ್ಯ ಕಾಂಗ್ರೆಸ್ ನಲ್ಲಿನ ಆಂತರಿಕ ಕಲಹ, ಗೊಂದಲಗಳಿಗೆ ಹೈಕಮಾಂಡ್ ನಾಯಕರು ತೆರೆ ಎಳೆದಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಸಚಿವ ಸತೀಶ್ ಜಾರಕೊಹೊಳಿ ಹೇಳಿಕೆಯಿಂದ ಆರಂಭವಾಗಿದ್ದ ಚರ್ಚೆಗೂ ಇತಿಶ್ರೀ ಹಾಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ, ಕಾಂಗ್ರೆಸ್ ನಲ್ಲಿ ಆಂತರಿಕ ಸಂಘರ್ಷ ಎಂಬ ವದಂತಿಯನ್ನು ಬಿಜೆಪಿ ನಾಯಕರು ಹಬ್ಬಿಸುತ್ತಿದ್ದಾರೆ. ಬಿಜೆಪಿ ಪ್ರಾಯೋಜಿತ ಮಾತಿಗಳಿಗೆ ವಿಶ್ವಾಸವಿಡಬೇಡಿ ಎಂದರು.
ಇದೇ ವೇಳೆ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಬಹಿರಂಗ ಹೇಳಿಕೆ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಮಾಡುತ್ತಿದ್ದರೆ ಅವರು ಇಲ್ಲಿಗೇಕೆ ಸಭೆಗೆ ಬರುತ್ತಿದ್ದರು? ಯಾವುದೇ ಬದಲಾವಣೆ ಇಲ್ಲ ಎಂದು ಹೇಳಿವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ