Belagavi NewsBelgaum NewsElection NewsPolitics

*ಬೆಳಗಾವಿಗೆ ಆಗಮಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ*

ಪ್ರಗತಿವಾಹಿನಿ ಸುದ್ದಿ: ಎಐಸಿಸಿ ಕಾರ್ಯದರ್ಶಿ, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಬೆಳಗಾವಿಗೆ ಆಗಮಿಸಿದ್ದಾರೆ.

ಬೆಳಗಾವಿಗೆ ಆಗಮಿಸಿದ ರಣದೀಪ್ ಸುರ್ಜೆವಾಲಾ ಅವರನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮೊದಲಾದವರು ಹೂಗುಚ್ಛ ನೀಡಿ ಸ್ವಾಗತಿಸಿದರು.

ಈ ವೇಳೆ ಬೆಳಗಾವಿಯ ಸದಾಶಿವನಗರದಲ್ಲಿರುವ ಅಥಣಿ ಶಾಸಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವಧಿ ಅವರ ನಿವಾಸಕ್ಕೂ ರಣದೀಪ್ ಸುರ್ಜೇವಾಲಾ ಭೇಟಿ ನೀಡಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಲಕ್ಷ್ಮಣ ಸವದಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶಾಸಕ ರಾಜು ಸೇಠ್ ಮೊದಲಾದವರು ಪ್ರಸಕ್ತ ಚುನಾವಣೆ ಕುರಿತು ಚರ್ಚಿಸಿದರು.

ಮೇ 7ರಂದು ನಡೆಯಲಿರುವ ಲೋಕಸಭಾ ಚುನಾವಣೆಯ 2ನೇ ಹಂತದ ಮತದಾನ ಹಿನ್ನೆಲೆಯಲ್ಲಿ ರಣದೀಪ್ ಸುರ್ಜೇವಾಲಾ ಕಾಂಗ್ರೆಸ್ ಭವನದಲ್ಲಿ ಬ್ಲಾಕ್ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರು, ಪದಾಧಿಕಾರಿಗಳ ಸಭೆ ನಡೆಸಲಿದ್ದಾರೆ.

Related Articles

Back to top button