*ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಗ್ ಶಾಕ್ ಕೊಟ್ಟ ಬೆಂಗಳೂರು ಪೊಲೀಸರು*

FIR ದಾಖಲು
ಪ್ರಗತಿವಾಹಿನಿ ಸುದ್ದಿ: ಬಾಲಿವುಡ್ ನಟ ರಣವೀರ್ ಸಿಂಗ್ ನಟನೆಯ ಜೊತೆಗೆ ವಿವಾದಗಳಿಂದಲೂ ಭಾರಿ ಸುದ್ದಿಯಾಗುತ್ತಿರುತ್ತಾರೆ. ಕಳೆದ ವರ್ಷ ಕಾಂತಾರಾ ಸಿನಿಮಾದ ಬಗ್ಗೆ ಮಾತನಾಡುತ್ತಾ ದೈವ ಅನುಕರಿಸಲು ಹೋಗಿ ವಿವಾದಕ್ಕೀಡಾಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಣವೀರ್ ಸಿಂಗ್ ವಿರುದ್ಧ ಪ್ರಕರಣ ದಾಖಲಾಗಿದೆ.
ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆ ಪೊಲೀಸರು ರಣವೀರ್ ಸಿಂಗ್ ವಿರುದ್ಧ ಕೇಸ್ ದಾಖಲಾಗಿದ್ದಾರೆ. ನವೆಂಬರ್ ೨೮ರಂದು ಗೋವಾದಲ್ಲಿ ನಡೆದ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಣವೀರ್ ಸಿಂಗ್ ಭಾಗಿಯಾಗಿದ್ದರು. ಕಾಂತಾರ ಚಿತ್ರದ ನಾಅಯಕ ನಿರ್ದೇಶಕ ರಿಷಬ್ ಶೆಟ್ಟಿ ಕೂಡ ಅಲ್ಲಿಯೇ ಇದ್ದರು. ಈ ವೇಳೆ ಕಾಂತಾರಾ ಸಿನಿಮಾ ಹಾಗೂ ರಿಷಬ್ ಶೆಟ್ಟಿ ಬಗ್ಗೆ ಮಾತನಾಡುತ್ತಾ ದೈವವನ್ನು ಅನುಕರಿಸಲು ಹೋಗಿದ್ದರು. ಈ ವಿಡಿಯೋ ವೈರಲ್ ಆಗಿತ್ತು. ರಣವೀರ್ ಸಿಂಗ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಭಕ್ತರ ಭಾವನೆಗೆ ಧಕ್ಕೆ ತರುವ ರೀತಿಯಲ್ಲಿ ಅಭಿನಯ ಮಾಡಿದ್ದಾರೆ ಎಂದು 1ನೇ ಎಸಿಎಂಎಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಾಗಿತ್ತು. ವಕೀಲ ಪ್ರಶಾಂತ್ ಮೇಥಲ್ ಖಾಸಗಿ ದೂರು ದಾಖಲಿಸಿದ್ದರು. ಇದೀಗ ನ್ಯಾಯಾಲಯ ಆದೇಶದ ಅನ್ವಯ ಬೆಂಗಳೂರು ಪೊಲೀಸರು ರಣವೀರ್ ಸಿಂಗ್ ವಿರುದ್ಧ ಎಫ್ ಐ ಆರ್ ದಾಖಲಿಸಿದ್ದಾರೆ.
ಕರಾವಳಿ ಭಾಗದಲ್ಲಿ ಆರಾಧಿಸುವ ಚಾವುಂಡಿ, ಗುಳಿಗ, ಪಂಜುರ್ಲಿ ದೈವಗಳನ್ನು ಅವಮಾನಿಸುವ ಉದ್ದೇಶದಿಂದ ಈ ಕೃತ್ಯವೆಸಗಲಾಗಿದೆ ಎಂದು ಎಫ್ ಐ ಆರ್ ನಲ್ಲಿ ಉಲ್ಲೇಖಿಸಲಾಗಿದೆ. ಬಿಎನ್ ಎಸ್ ಕಾಯ್ದೆ 196, 302, 299 ಅಡಿಯಲ್ಲಿ ಕೇಸ್ ದಾಖಲಾಗಿದೆ.

