
ಲೋಕಸಭಾ ಚುನಾವಣೆ ಅಖಾಡ ದಿನದಿಂದ ದಿನಕ್ಕೆ ರಂಗೇರುದೆ. ರಾಜಕೀಯ ನಾಯಕರು ಅಬ್ಬರದ ಪ್ರಚಾರದಲ್ಲಿ ತೊಡಗಿದ್ದಾರೆ. ವಿವಿಧ ಪಕ್ಷಗಳ ನಾಯಕರು ಭಾಷಣ ಮಾಡುವ ಬರದಲ್ಲಿ ನಾಲಿಗೆ ಮೇಲಿನ ಹಿಡಿತ ಕಳೆದುಕೊಳ್ಳುತ್ತಿದ್ದು, ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವ ಮೂಲ ವಿವಾದಕ್ಕೆ ಕಾರಣರಾಗುತ್ತಿದ್ದಾರೆ.
ಖ್ಯಾತ ನಟಿ, ಸಂಸದೆ ಹೇಮಾ ಮಾಲಿನಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದ ಆರೋಪದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ ವಿರುದ್ಧ ಚುನಾವಣಾ ಆಯೋಗ ಕ್ರಮ ಕೈಗೊಂಡಿದೆ.
ಮುಂದಿನ 48 ಗಂಟೆಗಳ ಕಾಲ ಯಾವುದೇ ಸಭೆ, ಸಾಮಾರಂಭಗಳನ್ನು ಮಾಡದಂತೆ ರಣದೀಪ್ ಸುರ್ಜೇವಾಲಾ ಅವರಿಗೆ ನಿಷೇಧಿಸಲಾಗಿದೆ. ಇಂದು ಸಂಜೆ 6 ಗಂಟೆಯಿಂದ 48 ಗಂಟೆಗಳ ಕಾಲ ಯಾವುದೇ ರ್ಯಾಲಿ, ಸಭೆ, ಸಮಾರಂಭಗಳನ್ನು ನಡೆಸದಂತೆ ಚುನಾವಣಾ ಆಯೋಗ ಖಡಕ್ ಸೂಚನೆ ನೀಡಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ