Latest

*ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ PSI*

ಪ್ರಗತಿವಾಹಿನಿ ಸುದ್ದಿ; ಹಾವೇರಿ: ಪಿಎಸ್ ಐ ಓರ್ವರು ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಜಿಲ್ಲೆ ರಾಣೆಬೆನ್ನೂರಿನಲ್ಲಿ ನಡೆದಿದೆ.

ರಾಣೆಬೆನ್ನೂರು ಶರ ಠಾಣೆಯ ಪಿಎಸ್ ಐ ಸುನೀಲ್ ತೇಲಿ ಹಾಗೂ ವಾಹನ ಚಾಲಕ ಸಚಿನ್ ಇಬ್ಬರನ್ನು ಲೋಕಾಯುಕ್ತ ಪೊಲಿಸರು ಬಂಧಿಸಿದ್ದಾರೆ.

ಫಿರೋಜ್ ಎಂಬುವವರಿಗೆ ಮನೆ ಬಾಡಿಗೆ ವಸೂಲಿ ಮಾಡಿಕೊಡಲು 50,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 40 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದಾಗ ಹಾವೇರಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿ ಪಿಎಸ್ ಐ ಸುನೀಲ್ ಸಿಕ್ಕಿಬಿದ್ದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button