ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ, ಸ್ನಾತಕೋತ್ತರ ಗಣಕ ವಿಜ್ಞಾನ ವಿಭಾಗವು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸೀಟು ಹಂಚಿಕೆಯ ನಂತರ ಮುಖ್ಯ ಆವರಣ ಹಾಗೂ ವಿಜಯಪುರ ಸ್ನಾತಕೋತ್ತರ ಕೇಂದ್ರದಲ್ಲಿ ಖಾಲಿ ಉಳಿದಿರುವ MCA ಕೋರ್ಸಿನ ಸರ್ಕಾರಿ ಕೋಟಾದಡಿಯಲ್ಲಿ (Government Quota), ಸೀಟುಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು UUCMS ತಂತ್ರಾಂಶದಲ್ಲಿ ಜನವರಿ.07 ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದು. University Common Entrance Test (U-CET) ವಿದ್ಯಾಲಯದ ಸಾಮಾನ್ಯ ಪರೀಕ್ಷೆಗಳನ್ನು ಜನವರಿ. 09 ರಂದು ಆಯಾ ಕೇಂದ್ರಗಳಲ್ಲಿ ನಡೆಸಲಾಗುತ್ತದೆ.
ಸಂಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಯೊಂದಿಗೆ ನಿಗದಿತ ಶುಲ್ಕ ಭರಿಸಿ ಧೃಡಿಕೃತ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಜನವರಿ 8 ಸಂಜೆ 5 ಗಂಟೆ ಒಳಗಾಗಿ ಮುಖ್ಯ ಆವರಣ ಹಾಗೂ ಸ್ನಾತಕೋತ್ತರ ಕೇಂದ್ರಗಳ ಗಣಕ ವಿಜ್ಞಾನ ವಿಭಾಗಗಳಲ್ಲಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ವಿಶ್ವವಿದ್ಯಾಲಯ ಜಾಲತಾಣ www.rcub.ac.in ಮೂಲಕ ಅಥವಾ ದೂರವಾಣಿ. 08312565244 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಉಪಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ