ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ನೂತನ ಕಟ್ಟಡದ ಉದ್ಘಾಟನೆಯ ಕಾರ್ಯಕ್ರಮವನ್ನು ಡಿಸೆಂಬರ್ 21ರಂದು ಬೆಳಿಗ್ಗೆ 10:೦೦ ಗಂಟೆಗೆ ನಡೆಯಲಿದ್ದು, ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರುನೆರವೇರಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ, ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರಾದ ಶಶಿಕಲಾ ಜೊಲ್ಲೆ, ಉನ್ನತ ಶಿಕ್ಷಣ, ಐಟಿ, ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಸಿ. ಎನ್. ಅಶ್ವತ್ಥನಾರಾಯಣ ಅವರು ಉಪಸ್ಥಿತರಿರುವರು.
ಬೆಳಗಾವಿ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ವಿಶೇಷ ಆಮಂತ್ರಿತರಾಗಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಮಹೇಶ ಕುಮಠಳ್ಳಿ, ಕರ್ನಾಟಕ ಆದಿ ಜಾಂಬವ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ದುರ್ಯೋಧನ ಐಹೊಳೆ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪಿ.ರಾಜೀವ ಅವರು ಉಪಸ್ಥಿತರಿರುವರು.
ಅತಿಥಿಗಳಾಗಿ ಬೆಳಗಾವಿಯ ಎಲ್ಲಾ ಸಂಸದರು, ಶಾಸಕರು, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರುಗಳು ಹಾಗೂ ಮಹಾನಗರ ಪಾಲಿಕೆಯ ಸದಸ್ಯರು, ಮುಖ್ಯ ಮಂತ್ರಿಗಳ ಪ್ರಧಾನ ಕಾರ್ಯದರ್ಶಿ, ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತರು, ಉತ್ತರ ವಲಯ ಬೆಳಗಾವಿ ಆರಕ್ಷಕ ಮಹಾನಿರೀಕ್ಷಕರು, ಬೆಳಗಾವಿಯ ಜಿಲ್ಲಾಧಿಕಾರಿಗಳು, ಬೆಳಗಾವಿ ನಗರದ ಪೊಲೀಸ್ ಆಯುಕ್ತರು, ಬೆಳಗಾವಿ ಜಿಲ್ಲಾ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿಗಳು ಆಗಮಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ರಾಮಚಂದ್ರಗೌಡ, ಕುಲ ಸಚಿವರಾದ ಕೆ. ಟಿ. ಶಾಂತಲಾ, ಮೌಲ್ಯಮಾಪನ ಕುಲಸಚಿವರಾದ ಪ್ರೊ. ಶಿವಾನಂದ ಗೊರನಾಳೆ, ಹಣಕಾಸು ಅಧಿಕಾರಿಗಳಾದ ಪ್ರೊ. ಎಸ್. ಬಿ. ಆಕಾಶ ಹಾಗೂ ವಿವಿಯ ಸಿಂಡಿಕೇಟ್ ಸದಸ್ಯರು, ವಿದ್ಯಾ ವಿಷಯಕ ಪರಿಷತ್ತಿನ ಸದಸ್ಯರು, ಉನ್ನತ ಅಧಿಕಾರಿಗಳು ಮತ್ತು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಶಂಕರ ಎಸ್. ತೇರದಾಳ ಅವರು ಉಪಸ್ಥಿತರಿರುವರು ಎಂದು ಮಹಾವಿದ್ಯಾಲಯದ ಪ್ರಾಚಾರ್ಯರು ತಿಳಿಸಿದ್ದಾರೆ.
*ಬೆಳಗಾವಿ ಸುವರ್ಣಸೌಧದಲ್ಲಿ ರಾಷ್ಟ್ರೀಯ ನಾಯಕರುಗಳ ಭಾವಚಿತ್ರಗಳ ಅನಾವರಣ*
https://pragati.taskdun.com/belagavi-sessionvidhanasabhevidhanaparishathsuvarna-vidhanasoudha/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ