
ಮಲತಂದೆ ಐಪಿಎಸ್ ಅಧಿಕಾರಿಗೂ ಸಂಕಷ್ಟ
ಪ್ರಗತಿವಾಹಿನಿ ಸುದ್ದಿ: ನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಏರ್ ಪೋರ್ಟ್ ಸಿಬ್ಬಂದ್ಯೇ ಭಾಗಿಯಾಗಿರುವುದು ಸತ್ಯ ಎಂಬ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
ಗೌರವ್ ಗುಪ್ತಾ ನೇತೃತ್ವದ ಸಮಿತಿ ನಡೆಸಿದ ತನಿಖೆಯಲ್ಲಿ ಪ್ರಾಥಮಿಕ ಹಂತದ ತನಿಖೆ ವೇಳೆ ಏರ್ ಪೋರ್ಟ್ ಸಿಬ್ಬಂದಿ ಭಾಗಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಹಾಗಾಗಿಯೇ ರನ್ಯಾ ರಾವ್ ಸುಲಭವಾಗಿ ಏರ್ ಪೋರ್ಟ್ ಮೂಲಕ ಚಿನ್ನ ಸಾಗಾಟ ಮಾಡುತ್ತಿದ್ದಳು.
ರನ್ಯಾ ರಾವ್ ವಿಮಾನ ನಿಲ್ದಾಣದ ಪ್ರೋಟೋಕಾಲ್ ನಿಯಮ ದುರುಪಯೋಗಪಡಿಸಿಕೊಂಡಿದ್ದಳು ಎಂಬುದು ಖಚಿತವಾಗಿದೆ. ಈ ನಿಟ್ಟಿನಲ್ಲಿ ಆಕೆಯ ಮಲತಂದೆ ಐಪಿಎಸ್ ಅಧಿಕಾರಿ ರಾಮಚಂದ್ರರಾವ್ ಅವರಿಗೂ ಸಂಕಷ್ಟ ಎದುರಾಗಿದೆ. ನಾಳೆ ಅಥವಾ ನಾಡಿದ್ದು, ಗೌರವ ಗುಪ್ತಾ ಸಮಿತಿ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಸಲಿದೆ.